Operation Mahadev: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಬಳಿ ಆಪರೇಷನ್ ಮಹಾದೇವ್ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಭಾರತೀಯ ಸೇನೆ ಹೇಳಿದೆ.
ಶ್ರೀನಗರದ ಡಚಿಗಾಮ್ ಪಾರ್ಕ್ ಬಳಿಯ ಹರ್ವಾನ್ ಪ್ರದೇಶದಲ್ಲಿ ಉಗ್ರರು ತಂಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.
ಹರ್ವಾನ್ ಪ್ರದೇಶದಲ್ಲಿ ಸೇನೆ, ಸಿಆರ್ಪಿಎಫ್ ಹಾಗೂ ಜಮ್ಮು-ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ಮುಂದುವರಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ರವಾನಿಸಲಾಗಿದೆ. ಉಗ್ರರ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಭಾರತೀಯ ಸೇನೆ ಚಿನಾರ್ ಕಾರ್ಪ್ಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದೆ.
ಪಹಲ್ಗಾಮ್ನಲ್ಲಿ ಉಗ್ರರು ದಾಳಿ ಮಾಡಿ 26 ಅಮಾಯಕ ಜನರನ್ನು ಗುಂಡಿಟ್ಟು ಕೊಂದಿದ್ದರು. ಬಳಿಕ ಪಾಕ್ ಉಗ್ರರ ಕ್ಯಾಂಪ್ಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ 9 ಸ್ಥಳಗಳನ್ನು ಉಡಾಯಿಸಿತ್ತು. ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಭಾರತೀಯ ಸೇನೆಯಿಂದ ಆಪರೇಷನ್ ಮಹಾದೇವ ಆರಂಭಿಸಲಾಗಿದೆ.