ರಾಂಚಿ: ಭಾರತೀಯ ಉಪಖಂಡದಲ್ಲಿ ಕಾರ್ಯಚರಿಸುತ್ತಿರುವ ಅಲ್- ಖೈದಾ ಸಂಘಟನೆಯೊಂದಿಗೆ (ಎಕ್ಯೂಐಎಸ್) ಸಂಪರ್ಕ ಹೊಂದಿದ್ದ 7 ಮಂದಿಯನ್ನು ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಗುರುವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಇಂದು ಮುಂಜಾನೆ ರಾಂಚಿ, ಹಜಾರಿಬಾಗ್ ಮತ್ತು ಲೋಹರ್ದಗಾ ಸೇರಿದಂತೆ ರಾಜ್ಯದ 14 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅವರು ಹೇಳಿದರು.
ದಾಳಿಗಳು ಮುಂದುವರೆದಿದ್ದು, ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಸುಮಾರು ಏಳು ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಟಿಎಸ್) ರಿಷಬ್ ಝಾ ಪಿಟಿಐಗೆ ತಿಳಿಸಿದ್ದಾರೆ.