ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-1ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 75 ಸಾವಿರ ರೂ. ದಂಡ ವಿಧಿಸಿದ್ದಾರೆ.
ಇದನ್ನೂ ಓದಿ: "ಈಕೆಗ್ಯಾಕೆ ಕೋಪ? ನನಗಂತು ಅರ್ಥವಾಗ್ತಿಲ್ಲ": ಕ್ರಿಕೆಟಿಗ ಶ್ರೀಶಾಂತ್ ಪತ್ನಿ ಛೀಮಾರಿಗೆ ಲಲಿತ್ ಮೋದಿ ತಿರುಗೇಟು | Lalit Modi
ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ ಅವರು ವಿಚಾರಣೆ ನಡೆಸಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಇದೇ ವೇಳೆ ಶಿವಮೊಗ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸಂತ್ರಸ್ತ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.
2022ರಲ್ಲಿ ತೀರ್ಥಹಳ್ಳಿ ತಾಲೂಕಿನ ವ್ಯಕ್ತಿ 17 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಸಿಪಿಐ ಪ್ರವೀಣ್ ನೀಲಮ್ಮನವರ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.