ನ್ಯೂಸ್

ಶಾಹೀನ್​ಬಾಘ್​ ರಸ್ತೆ ತೆರವುಗೊಳಿಸುವಂತೆ ಹಿಂದೂ ಸೇನಾ ಸಂಘಟನೆ ಕರೆ ನೀಡಿದ ಬೆನ್ನಲ್ಲೇ ಅಧಿಕ ಪೊಲೀಸರ ನಿಯೋಜನೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ 2 ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ಶಾಹೀನ್​ಬಾಘ್​ ಪ್ರದೇಶದಲ್ಲಿ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.

ಶಾಹೀನ್ ಬಾಘ್​ ರಸ್ತೆಯನ್ನು ತೆರವುಗೊಳಿಸುವಂತೆ ಹಿಂದೂ ಸೇನಾ ಸಂಘಟನೆ ಕರೆ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.

ಪ್ರತಿಭಟನೆ ನಡೆಯುತ್ತಿರುವ ಸ್ಥಳ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಶಾಹೀನ್​ಬಾಘ್​​​ನಲ್ಲಿ ಯಾವುದೇ ಅಹಿತರಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಉದ್ದೇಶ ಎಂದು ಜಂಟಿ ಪೊಲೀಸ್​ ಆಯುಕ್ತ ಡಿ.ಸಿ.ಶ್ರೀವಾಸ್ತವ ಹೇಳಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ ಸಂಭವಿಸಿ 42 ಮಂದಿ ಮೃತಪಟ್ಟಿದ್ದಾರೆ. 300ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. (ಏಜೆನ್ಸೀಸ್​)