ಮುಂಬೈ: ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ‘ಡಂಕಿ’ ಸಿನಿಮಾ ಇದೇ ಡಿಸೆಂಬರ್ 22 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲು ಸಜ್ಜಾಗಿದೆ. ಮುಖ್ಯಭೂಮಿಕೆಯಲ್ಲಿ ಶಾರುಖ್ ಖಾನ್, ತಾಪ್ಸಿ ಪನ್ನು, ವಿಕ್ಕಿ ಕೌಶಲ್ ಇದ್ದು, ಇತ್ತೀಚೆಗೆ ರಿಲೀಸ್ ಆದ ಟೀಸರ್ ಹಾಗೂ ಹಾಡು ಸಿನಿಪ್ರೇಕ್ಷಕರ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.
ಇದನ್ನೂ ಓದಿ: ಕಾವೂರು ಮಾರುಕಟ್ಟೆಗೆ ಸ್ಥಳಾಂತರವಾಗಲು ವಾರದ ಗಡುವು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸೂಕ್ತ ಕ್ರಮದ ಎಚ್ಚರಿಕೆ
ಶಾರುಖ್ ಖಾನ್ ನಟನೆಯ ‘ಪಠಾಣ್’ ಹಾಗೂ ‘ಜವಾನ್’ ಸಿನಿಮಾ ಹಿಟ್ ಆದ ಬಳಿಕ ‘ಡಂಕಿ’ ಚಿತ್ರದ ಬಗ್ಗೆ ಇರುವ ನಿರೀಕ್ಷೆ ಈಗ ದ್ವಿಗುಣವಾಗಿದೆ. ಅಷ್ಟಕ್ಕೂ ಡಂಕಿ ಅರ್ಥ ಏನೆಂದು ತಿಳಿಯಬೇಕಿದೆ. ಅಭಿಮಾನಿಗಳಿಂದ ಈ ಬಗ್ಗೆ ಪ್ರಶ್ನೆಯೊಂದು ಎದುರಾಗಿದ್ದು, ಇದಕ್ಕೆ ತಮ್ಮದೇ ಸ್ಟೈಲ್ನಲ್ಲಿ ಶಾರುಖ್ ಉತ್ತರ ನೀಡಿದ್ದಾರೆ.
ಶಾರುಖ್ ಅಭಿಮಾನಿ ಬಳಗ ದೊಡ್ಡದಿದೆ. ಸಮಯ ಸಿಕ್ಕಾಗ ಅವರು ಟ್ವಿಟರ್ನಲ್ಲಿ ಆಗಾಗ್ಗೆ #AskSRK ಸೆಷನ್ ನಡೆಸುತ್ತಾರೆ. ಅಭಿಮಾನಿಗಳು ತಮ್ಮಿಷ್ಟದ ಪ್ರಶ್ನೆ ಮುಂದಿಡಬಹುದು. ಇದಕ್ಕೆ ಎಸ್ಆರ್ಕೆ ಉತ್ತರಿಸುವ ಪ್ರಯತ್ನ ಮಾಡುತ್ತಾರೆ. ಅವರಿಗೆ ಹಲವು ರೀತಿಯ ಪ್ರಶ್ನೆಗಳು ಎದುರಾಗುತ್ತವೆ. ಆ ಪೈಕಿ ‘ಡಂಕಿ’ ಸಿನಿಮಾ ಬಗ್ಗೆಯೂ ಪ್ರಶ್ನೆ ಕೇಳಲಾಗಿದೆ.
ಇದನ್ನೂ ಓದಿ: ಉತ್ತರಕಾಶಿ ಸುರಂಗ ಕುಸಿತ: ಕಾರ್ಯಾಚರಣೆಗೆ ಬಂದಿದ್ದ ಅಮೆರಿಕಾದ ಆಗರ್ ಯಂತ್ರ ಛಿದ್ರ- ಹಾಗಾದರೆ 41 ಕಾರ್ಮಿಕರ ರಕ್ಷಣೆ ಹೇಗೆ?
ಅಭಿಮಾನಿಯೊಬ್ಬ ಡಂಕಿ ಅರ್ಥ ಕೇಳಿದ್ದಾನೆ. ಇದಕ್ಕೆ ಉತ್ತರಿಸಿದ ಶಾರುಖ್ ಖಾನ್ ಸಖತ್ ತಮಾಷೆಯಾಗಿ ಹೇಳಿದ್ದಾರೆ. ಕಾನೂನು ಬಾಹಿರವಾಗಿ ಗಡಿ ಪ್ರವೇಶಕ್ಕೆ ಡಂಕಿ ಎಂದು ಕರೆಯಲಾಗಿದೆ. ಅದನ್ನು ಡಂಕಿ ಎಂದು ಉಚ್ಛರಿಸಲಾಗುತ್ತದೆ. ಆದರೆ ಫಂಕಿ...ಹಂಕಿ....ಅಥವಾ ಮಂಕಿ ಎಂದು ಉಚ್ಚರಿಸಲಾಗುತ್ತಿದೆ ಎಂದು ಫನ್ ಆಗಿ ಉತ್ತರಿಸಿದ್ದಾರೆ.
ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ನಿರ್ವಹಿಸಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.