ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷರಾದ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ಮದುವೆ ಸಮಾರಂಭಕ್ಕೆ ಇದೀಗ ಮುಹೂರ್ತ ಫಿಕ್ಸ್ ಆಗಿದ್ದು, ಹೆಸರಾಂತ ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.
ಅನಂತ್-ರಾಧಿಕಾ ಜೋಡಿಯ ಮದುವೆ ಆಮಂತ್ರಣ ಪತ್ರಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ದುಬಾರಿ ಮೊತ್ತದ ಮದುವೆಯ ಮಮತೆಯ ಕರೆಯೋಲೆ ನೋಡಿ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ. ಜುಲೈ 12ರಂದು ಮುಂಬೈನಲ್ಲಿ ನಡೆಯಲಿರುವ ಅದ್ಧೂರಿ ವಿವಾಹಕ್ಕೆ ಈಗಾಗಲೇ ದಿನಗಣನೆ ಆರಂಭಗೊಂಡಿದೆ. ಇನ್ನು ನಿನ್ನೆಯಿಂದಲೇ ಈ ಜೋಡಿಯ ಪ್ರೀ-ವೆಡ್ಡಿಂಗ್ ಬ್ಯಾಶ್ ದೊಡ್ಡ ಹಡಗಿನಲ್ಲಿ ನಡೆಯುತ್ತಿದ್ದು, ಖ್ಯಾತ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ವರದಿಗಳ ಪ್ರಕಾರ, ಜಾಗತಿಕ ಮಟ್ಟದಲ್ಲಿ ಸೆನ್ಸೇಷನ್ ಮೂಡಿಸಿರುವ ಗಾಯಕಿ ಶಕೀರಾ ಅವರು ನಾಲ್ಕು ದಿನಗಳ ಕಾಲ ನಡೆಯಲಿರುವ ಅನಂತ್-ರಾಧಿಕಾ ಜೋಡಿಯ ಪ್ರೀ-ವೆಡ್ಡಿಂಗ್ ಬ್ಯಾಶ್ನಲ್ಲಿ ವಿಶೇಷ ಮನರಂಜನಾ ಕಾರ್ಯಕ್ರಮ ನಡೆಸಿಕೊಡಲಿದ್ದು, ಇದಕ್ಕಾಗಿ ಬರೋಬ್ಬರಿ 10-15 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಖ್ಯಾತ ಪಾಪ್ ಸಿಂಗರ್ ರಿಹಾನಾ ನಂತರ ಇದೀಗ ಶಕೀರಾ ಈ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ,(ಏಜೆನ್ಸೀಸ್).