ನ್ಯೂಸ್

‘ಶಕ್ತಿ’ ಶತಕೋಟಿ ಸಂಭ್ರಮ

ಶ್ರೀಕಾಂತ್ ಶೇಷಾದ್ರಿ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯ ಶತಕೋಟಿ ಸಂಭ್ರಮ ಹಾಗೂ ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಅಪಘಾತ ರಹಿತ ಚಾಲಕರಿಗೆ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಸಮಾರಂಭ ನ.24ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವುದು.

ಮಧ್ಯಾಹ್ನ 12 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪಾಲ್ಗೊಳ್ಳುವರು.

ರಾಜ್ಯದ ಉದ್ದಗಲಕ್ಕೂ ಸಾರಿಗೆ ನಿಗಮದ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾದ ಶಕ್ತಿ ಯೋಜನೆ ಜೂನ್ 11ರಂದು ಆರಂಭವಾಗಿತ್ತು. ಯೋಜನೆ ಜಾರಿಯಾದಲ್ಲಿಂದ ಇಲ್ಲಿಯವರೆಗೆ ನಾಲ್ಕೂ ನಿಗಮಗಳಲ್ಲಿ 2.39 ಕೋಟಿ ಪ್ರಯಾಣಿಕರು ಸಂಚರಿಸಿದ್ದಾರೆ. ಇವರಲ್ಲಿ 1 ಕೋಟಿ ಮಹಿಳೆಯರಾಗಿದ್ದಾರೆ. ಇವರ ಪ್ರಯಾಣಕ್ಕಾಗಿ 2397 ಕೋಟಿಯನ್ನು ಸರ್ಕಾರ ವೆಚ್ಚ ಮಾಡಿದೆ.