ಸಾಂದರ್ಭಿಕ ಚಿತ್ರ 
ನ್ಯೂಸ್

3 ದಿನದಲ್ಲಿ 98 ಲಕ್ಷ ಮಹಿಳೆಯರಿಂದ ಉಚಿತ ಪ್ರಯಾಣ; ಸರ್ಕಾರಕ್ಕಾದ ಖರ್ಚು 21 ಕೋಟಿ ರೂ.

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಮೊದಲ ದಿನ 5,71,023 ಮಹಿಳೆಯರು ಪ್ರಯಾಣಿಸಿದ್ದರು. ಇದೀಗ ಮೂರು ದಿನದಲ್ಲಿ 98.58 ಲಕ್ಷ ಮಹಿಳೆಯರು ರಾಜ್ಯಾದ್ಯಂತ ಪ್ರಯಾಣಿಸಿದ್ದಾರೆ.

ಮೂರು ದಿನಗಳಲ್ಲಿ 98.58 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವುದರಿಂದ, ಸರ್ಕಾರ ಇದೀಗ 21.05 ಕೋಟಿ ರೂ. ಖರ್ಚು ಭರಿಸಬೇಕಿದೆ. ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಬಸ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣಿಸಿದ್ದಾರೆ.

ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ನಷ್ಟವಿಲ್ಲ

ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುವುದಿಲ್ಲ. ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರಿಗೆ ಇದರಿಂದ ಉಪಯೋಗವಾಗುತ್ತದೆ. ನಮ್ಮ ಕೆಲಸಗಳೇ ಪ್ರತಿಪಕ್ಷಗಳ ಟೀಕೆಗೆ ಉತ್ತರ ಕೊಡುತ್ತವೆ. ನಾವು ಐದು ವರ್ಷವೂ ಕೊಟ್ಟ ಗ್ಯಾರಂಟಿಯನ್ನು ನೀಡುತ್ತೇವೆ. ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.