ಹಾವೇರಿ: ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪಚುನಾಚಣೆ ಹಿನ್ನಲೆಯಲ್ಲಿ ಸಾಮಾನ್ಯ ವೀಕ್ಷಕರಿಗೆ ಹಾಗೂ ವೆಚ್ಚ ವೀಕ್ಷಕರಿಗೆ ಲೈಸನ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.
ಸಾಮಾನ್ಯ ವೀಕ್ಷಕರಿಗೆ ಲೈಸನ್ ಅಧಿಕಾರಿಯಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಶೋಕ ಗದ್ದಿಗೌಡರ (9402216015) ಹಾಗೂ ವೆಚ್ಚ ವೀಕ್ಷಕರಿಗೆ ಲೈಸನ್ ಅಧಿಕಾರಿಯಾಗಿ ಡಯಟ್ ಹಿರಿಯ ಉಪನ್ಯಾಸಕ ಎಂ.ಎಚ್. ಪಾಟೀಲ (9449570905) ಅವರನ್ನು ನೇಮಕ ಮಾಡಲಾಗಿದೆ.