ಮಕ್ಕಳ ದಿನಾಚರಣೆ ಅಂಗವಾಗಿ ಶಿಕಾರಿಪುರದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಮಕ್ಕಳು ಕೇಕ್ ಕತ್ತರಿಸಿದರು. ಡಾ. ಎಂ.ವೀರೇಂದ್ರ, ಶಿವರಾಜ್, ವಿದ್ಯಾರ್ಥಿಗಳು ಹಾಜರಿದ್ದರು. 
ನ್ಯೂಸ್

ಆತ್ಮವಿಶ್ವಾಸವಿದ್ದರೆ ಯಶಸ್ಸು ಗಳಿಸಲು ಸಾಧ್ಯ Shikaripura

ಶಿಕಾರಿಪುರ: ಮಕ್ಕಳು ಆತ್ಮವಿಶ್ವಾಸದಿಂದ ಮುನ್ನಡೆದಾಗ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೀರೇಂದ್ರ ಹೇಳಿದರು.

ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಲ್ಲಿ ಅಪಾರ ಪ್ರತಿಭೆ ಇರುತ್ತದೆ. ಪಾಲಕರು ಹಾಗೂ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಸಂಸ್ಕಾರ, ಸಂಸ್ಕೃತಿ ಮಹತ್ವ, ಸದ್ವಿಚಾರಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಧೀಮಂತ ರಾಜಕಾರಣಿಗಳಲ್ಲಿ ಒಬ್ಬರು. ಮಕ್ಕಳು ಭವಿಷ್ಯದ ರೂವಾರಿಗಳು, ಸಾಹಸಿಗರು, ವಿಜ್ಞಾನಿಗಳು ಹಾಗೂ ದೇಶದ ಸಂಪತ್ತು ಎಂದಿದ್ದರು. ಮಕ್ಕಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ಉಪನ್ಯಾಸಕ ಶಿವರಾಜ್ ಮಾತನಾಡಿ, ನೆಹರು ಅವರು ದೇಶದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಪಂಚವಾರ್ಷಿಕ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದರು ಎಂದು ತಿಳಿಸಿದರು. ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.