ನ್ಯೂಸ್

ಶಿರೂರ ಸಂಶೋಧನ ಪ್ರಶಸ್ತಿ ಪ್ರದಾನ ಇಂದು

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ವಿದ್ಯಾವರ್ಧಕ ಸಂಘವು ಡಾ. ಬಿ.ವಿ. ಶಿರೂರ ದತ್ತಿ ನಿಮಿತ್ತ ಫೆ. 1ರಂದು ಸಂಜೆ 6 ಗಂಟೆಗೆ ರಾ.ಹ. ದೇಶಪಾಂಡೆ ಭವನದಲ್ಲಿ ಡಾ. ಬಿ.ವಿ. ಶಿರೂರ ಸಂಶೋಧನ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಿದೆ.

ಹಂಪಿ ಕನ್ನಡ ವಿಶ್ವ ವಿದ್ಯಾಲಯ ಹಸ್ತ ಪ್ರತಿಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ. ರವೀಂದ್ರನಾಥ ಅವರಿಗೆ ಡಾ. ಬಿ.ವಿ. ಶಿರೂರ ಸಂಶೋಧನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ. ಎಫ್.ಟಿ. ಹಳ್ಳಿಕೇರಿ ಅಭಿನಂದನಾ ನುಡಿಗಳನ್ನಾಡುವರು.

ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ವಿಶ್ರಾಂತ ಪ್ರಾಧ್ಯಾಪಕ ಡಾ. ಜೆ. ಎಂ. ನಾಗಯ್ಯ ಅವರು ಡಾ. ಬಿ.ವಿ. ಶಿರೂರ ಅವರ ಸಂಶೋಧನೆ ಕುರಿತು ಉಪನ್ಯಾಸ ನೀಡುವರು. ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಅಧ್ಯಕ್ಷ ಡಾ. ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು. ಸಂಶೋಧಕರಾದ ಡಾ. ಬಿ.ವಿ. ಶಿರೂರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.