ನ್ಯೂಸ್

ಶಿರೂರು ಗುಡ್ಡ ಕುಸಿತ;ಎನ್‌ಎಚ್ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯ

Bengaluru - Political - Shivananda Tagadur

ಬೆಂಗಳೂರು:
ಉತ್ತರ ಕನ್ನಡ ರಾಷ್ಟ್ರೀಯ ಹೆದ್ದಾರಿ ಶಿರೂರಿನಲ್ಲಿ ಗುಡ್ಡಕುಸಿದು 5 ಮಂದಿ ಸಾವನ್ನಪ್ಪಿರುವುದಕ್ಕೆ ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣವಾಗಿದ್ದು, ಈ ಗುಡ್ಡ ಕುಸಿತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ ಶೂನ್ಯವೇಳೆಯಲ್ಲಿ ಒತ್ತಾಯಿಸಿದರು.
ಈ ಗುಡ್ಡ ಕುಸಿತ ಆಕಸ್ಮಿಕವಲ್ಲ, ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿಯ ಪರಿಣಾಮ ಗುಡ್ಡ ಕುಸಿದಿದೆ ಎನ್ನುವುದು ಸ್ಪಷ್ಟವಾಗಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕಾಮಗಾರಿ ನಡೆಸಿದ ಕಂಪೆನಿಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಭ್ರೂಣ ಹತ್ಯೆ: ಕಠಿಣ ಕ್ರಮಕ್ಕೆ ಆಗ್ರಹ
ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಭ್ರೂಣ ಹತ್ಯೆಯ ಬಳಿಕ ಈಗ ಬೆಳಗಾವಿ ಜಿಲ್ಲೆಯಲ್ಲೂ ಈ ರೀತಿಯ ಪ್ರಕರಣ ಹೊರಗೆ ಬಂದಿದ್ದು, ಈ ಕೃತ್ಯದಲ್ಲಿ ಪಾಲ್ಗೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ನ ಉಮಾಶ್ರೀ ಒತ್ತಾಯಿಸಿದರು.