ಸೊರಬ ಚಂದ್ರಗುತ್ತಿ ಶ್ರೀ ರೇಣುಕಾಂಬ ದಸರಾ ಉತ್ಸವ ಆಚರಣಾ ಸಮಿತಿಯಿಂದ ಕಾರ್ಕಳ ಶಾಸಕ ಸುನೀಲ್‌ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಆರ್.ಶ್ರೀಧರ್ ಹುಲ್ತಿಕೊಪ್ಪ, ಎಂ.ಬಿ.ರೇಣುಕಾ ಪ್ರಸಾದ್ ಇತರರಿದ್ದರು.  
ನ್ಯೂಸ್

ಅನ್ನದಾಸೋಹ ಸೇವೆ ಶ್ಲಾಘನೀಯ

ಸೋಮಶೇಖರ ಎನ್

ಸೊರಬ: ಸಾಂಸ್ಕೃತಿಕ ಉತ್ಸವದ ಜತೆಯಲ್ಲಿ ಅನ್ನದಾಸೋಹ ಸೇವೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದರು.

ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಸಮಿತಿ ಪದಾಧಿಕಾರಿಗಳು ಹತ್ತು ವರ್ಷಗಳಿಂದ ವೈವಿಧ್ಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸೋಣ ಎಂದರು.

ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ ಆಚರಣಾ ಸಮಿತಿ ಅಧ್ಯಕ್ಷ ಆರ್.ಶ್ರೀಧರ್ ಹುಲ್ತಿಕೊಪ್ಪ, ಗ್ರಾಪಂ ಉಪಾಧ್ಯಕ್ಷ ಎಂ.ಬಿ.ರೇಣುಕಾ ಪ್ರಸಾದ್, ಮಾಜಿ ಅಧ್ಯಕ್ಷ ಎಂ.ಪಿ.ರತ್ನಾಕರ, ಸುನೀಲ್ ಗೌಡ, ಎನ್.ಜಿ.ನಾಗರಾಜ್, ರಘು, ವಸಂತ್ ಶೇಟ್, ಗಣಪತಿ ಸಂಗೇರ್, ಯಶವಂತಪ್ಪ, ಶಶಿಧರ ಇತರರಿದ್ದರು.