ಮಹಾಶಿವರಾತ್ರಿ ಜಾಗರಣೆ ಅಂಗವಾಗಿ ಆಯನೂರಿನ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶಿಸಿದ ಎಸ್‌ಎಸ್‌ಎ ಭರತನಾಟ್ಯ ಗ್ರೂಪ್ ಮಕ್ಕಳು.  
ನ್ಯೂಸ್

ಮಕ್ಕಳಿಂದ ಭರತನಾಟ್ಯ ಪ್ರದರ್ಶನ

ಆಯನೂರು: ಆಯನೂರಿನ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಿಸಲಾಯಿತು.

ಸಿದ್ದೇಶ್ವರ ದೇವರಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ಹಾಗೂ ಅಭಿಷೇಕ ಮಾಡಲಾಯಿತು. ಜಾಗರಣೆ ಅಂಗವಾಗಿ ಆಯನೂರಿನ ಎಸ್‌ಎಸ್‌ಎ ಭರತನಾಟ್ಯ ಗ್ರೂಪ್ ಮಕ್ಕಳು ಭರತನಾಟ್ಯ ಪ್ರದರ್ಶಿಸಿದರು. ಸ್ಥಳೀಯ ಭಜನಾ ಮಂಡಳಿ ಸದಸ್ಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.

ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೇವರಿಗೆ ರುದ್ರಾಭಿಷೇಕ ಹಾಗೂ ಮಹಾಮಂಗಳಾರತಿ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಧರ್ಮಶ್ರೀ ಸೇವಾ ಟ್ರಸ್ಟ್ ಅಧ್ಯಕ್ಷ ಆಯನೂರು ಮಂಜುನಾಥ್, ಮಂಜುಳಾ ಮಂಜುನಾಥ್, ವೈ.ಎಚ್.ನಾಗರಾಜ್, ಮಂಜುನಾಥ ಶೆಟ್ಟಿ, ಕೇಶವ ನಾಯರ್, ಜಯರಾಮ್ ನಾಯ್ಕ, ಸುರೇಶ್, ಗ್ರಾಮಸ್ಥರು ಜಾಗರಣೆಯಲ್ಲಿ ಭಾಗವಹಿಸಿದ್ದರು.