ಶಿವಮೊಗ್ಗ: ಶವಗಾರದಲ್ಲಿ ವಿದ್ಯುತ್ ಇಲ್ಲದೇ ಪರದಾಡುತ್ತಿರುವ ವೈದ್ಯರು, ಹೆಡ್ ಲ್ಯಾಂಪ್ ಬೆಳಕಿನಲ್ಲಿಯೇ ಮರಣೋತ್ತರ ಪರೀಕ್ಷೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಈ ಘಟನೆ ನಡೆದಿದೆ.
ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಮೃತದೇಹದ ಮರಣೋತ್ತರ ತಪಾಸಣೆಗೆ ತಂದಾಗ ವೈದ್ಯರು ಮೊಬೈಲ್ ಟಾರ್ಚ್ ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ನಡೆದಿದ್ದಾರೆ.
ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಜನರು ಆಕ್ರೋಶವ್ಯಕ್ತಪಡಿಸಿದ್ದಾರೆ. ಹಗಲು ವೇಳೆಯಲ್ಲಿ ಇಬ್ಬರು ವೈದ್ಯರು ಕಾರ್ಯ ನಿರ್ವಹಿಸುತ್ತಿರುವ ಈ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರುವುದಿಲ್ಲ. ಈ ಬಗ್ಗೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ವೈಧ್ಯಾಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ.
ಮೇಲಾಧಿಕಾರಿಗಳ ನಿರ್ಲಕ್ಷ್ಯವೇ ಇಷ್ಟಕ್ಕೆಲ್ಲ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.