ಭದ್ರಾವತಿ: ಮಹಿಳೆಯರು ಸಾಧನೆ ಮಾಡಲು ಪ್ರೋತ್ಸಾಹ ಹಾಗೂ ಅಗತ್ಯ ಸಹಕಾರ ನೀಡಬೇಕು ಎಂದು ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ ಹೇಳಿದರು.
ವಿಐಎಸ್‌ಎಲ್ ಕಾರ್ಖಾನೆ ಆವರಣದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಲು ಮತ್ತು ಸಾಮರ್ಥ್ಯ ಪ್ರದರ್ಶಿಸಲು ಹೆಚ್ಚಿನ ಬೆಂಬಲ ನೀಡಬೇಕು ಎಂದರು.
ಮಹಿಳಾ ಉದ್ಯೋಗಿಗಳು, ಗುತ್ತಿಗೆ ಕಾರ್ಮಿಕರಿಗೆ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಿಸಲಾಯಿತು. ಹೈಬ್ರೀಡ್ ತಳಿ ಪಪ್ಪಾಯ ಮತ್ತು ನುಗ್ಗೆ ಸಸಿಗಳನ್ನು ಮಹಿಳಾ ಕಾರ್ಮಿಕರಿಗೆ ವಿತರಿಸಲಾಯಿತು. ಮಹಿಳೆಯರು ಮತ್ತು ಬಾಲಕಿಯರಿಗಾಗಿ ಹಕ್ಕುಗಳು, ಸಮಾನತೆ ಮತ್ತು ಸಬಲತೆ ಎಂಬ ಧ್ಯೇಯದೊಂದಿಗೆ ಮಹಿಳಾ ದಿನ ಆಚರಿಸಲಾಯಿತು.
ವಿಐಎಸ್‌ಎಲ್ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಶೋಭಾ, ಕಾರ್ಖಾನೆ ಮುಖ್ಯ ಮಹಾಪ್ರಬಂಧಕ (ಸ್ಥಾವರ) ಕೆ.ಎಸ್.ಸುರೇಶ್, ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್.ಪ್ರವೀಣ್‌ಕುಮಾರ್, ಮಹಾಪ್ರಬಂಧಕ (ಹಣಕಾಸು) ಶೋಭಾ ಶಿವಶಂಕರನ್, ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ, ಡಾ. ಸುಷ್ಮಾ ಇತರರಿದ್ದರು.