ಪರಿಸರ ದಿನಾಚರಣೆ ಅಂಗವಾಗಿ ಕೋಟಿಪುರದ ಎವರಾನ್ ಇಂಟರ್‌ನ್ಯಾಷನಲ್ ಶಾಲೆ ಆವರಣದಲ್ಲಿ ಕಾರ್ತಿಕ್ ಸಾಹುಕಾರ್ ಸಸಿ ನೆಟ್ಟರು. ಚರಿತಾ ಕಾರ್ತಿಕ್, ಕಲಂದರ್ ಸಾಬ್ ಇತರರಿದ್ದರು.  
ನ್ಯೂಸ್

ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ

ಸೊರಬ: ಪರಿಸರ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಎವರಾನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆ ಮುಖ್ಯಸ್ಥ ಕಾರ್ತಿಕ್ ಸಾಹುಕಾರ್ ಹೇಳಿದರು.

ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ಆನವಟ್ಟಿ ಕೋಟಿಪುರದ ಎವರಾನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆ ಆವರಣದಲ್ಲಿ ಗಿಡಗಳನ್ನು ನೆಟ್ಟು ಮಾತನಾಡಿ, ಪ್ಲಾಸ್ಟಿಕ್ ನಿರ್ಮೂಲನೆ ಮಾಡುವಲ್ಲಿ ಎಲ್ಲರ ಸಹಕಾರ ಮುಖ್ಯ. ಪ್ರತಿಯೊಬ್ಬರೂ ಸಸಿಗಳನ್ನು ಬೆಳೆಸಬೇಕು. ಮಕ್ಕಳಲ್ಲೂ ಪರಿಸರ ಕಾಳಜಿ ಭಾವನೆ ಬೆಳೆಯುವಂತೆ ಮಾಡಬೇಕು ಎಂದು ತಿಳಿಸಿದರು.

ಪರಿಸರದ ಮಹತ್ವದ ಬಗ್ಗೆ ಕ್ವಿಜ್ ಏರ್ಪಡಿಸಿ ಬಹುಮಾನ ನೀಡಲಾಯಿತು. ಶಾಲೆ ಆವರಣದಲ್ಲಿ ಹೊಸದಾಗಿ ಸೇರಿದ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆ ಮುಖ್ಯಸ್ಥೆ ಚರಿತಾ ಕಾರ್ತಿಕ್, ಗ್ರಾಪಂ ಮಾಜಿ ಉಪಾಧ್ಯಕ್ಷ ಕಲಂದರ್ ಸಾಬ್, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.