ಆಯನೂರು ಸಮೀಪದ ಸಿರಿಗೆರೆಯಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಪಿಯುಸ್ ಡಿಸೋಜ, ರೂಪಾ, ನಾಗರತ್ನಮ್ಮ, ಯೋಗೇಂದ್ರ ಇತರರಿದ್ದರು. 
ನ್ಯೂಸ್

ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವುದು ಅವಶ್ಯ

ಆಯನೂರು: ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವಲ್ಲಿ ಶಿಕ್ಷಕರು ಮತ್ತು ಪಾಲಕರು ಆದ್ಯತೆ ನೀಡಬೇಕು. ಮೊಬೈಲ್‌ನಲ್ಲಿ ಸಮಯ ವ್ಯರ್ಥ ಮಾಡುವುದನ್ನು ಬಿಟ್ಟು ಮಕ್ಕಳು ಉನ್ನತ ಸಾಧನೆ ಮಾಡಬೇಕು ಎಂದು ಅಹಿಂದ ಸಂಘಟನೆ ರಾಜ್ಯಾಧ್ಯಕ್ಷೆ ಕವಿತಾ ಥೋರತ್ ಹೇಳಿದರು.

ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿಯಿಂದ ತಾಲೂಕಿನ ಸಿರಿಗೆರೆ ಗ್ರಾಪಂ ವ್ಯಾಪ್ತಿಯ ಇಟ್ಟಿಗೆಹಳ್ಳಿ ಮತ್ತು ಸಿರಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮೂಲಕ ಬಹಳಷ್ಟು ಮಕ್ಕಳು ಅಡ್ಡದಾರಿ ಹಿಡಿಯುತ್ತಿದ್ದಾರೆ. ಪಾಲಕರು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮುಗಿಸಿ ಐಎಎಸ್ ಮತ್ತು ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಉನ್ನತ ಹುದ್ದೆ ತಲುಪಿರುವ ಸಾಧಕರು ಮಕ್ಕಳಿಗೆ ಸ್ಫೂರ್ತಿ. ಮಕ್ಕಳು ಶ್ರದ್ಧೆಯಿಂದ ಅಧ್ಯಯನ ನಡೆಸಬೇಕು ಎಂದರು.

ಸಂಸ್ಥೆ ನಿರ್ದೇಶಕ ಫಾದರ್ ಪಿಯುಸ್ ಡಿಸೋಜ, ಸಿರಿಗೆರೆ ಸ್ತ್ರೀಬಂಧು ಒಕ್ಕೂಟದ ಅಧ್ಯಕ್ಷೆ ರೂಪಾ, ಸಿರಿಗೆರೆ ಗ್ರಾಪಂ ಉಪಾಧ್ಯಕ್ಷೆ ನಾಗರತ್ನಮ್ಮ, ಸದಸ್ಯ ಯೋಗೇಂದ್ರ, ಸ್ವಸಹಾಯ ಸಂಘಗಳ ಮಹಿಳೆಯರು, ಗ್ರಾಮಸ್ಥರು, ಮಕ್ಕಳು, ಸಂಸ್ಥೆ ಸಿಬ್ಬಂದಿ ಹಾಜರಿದ್ದರು.