ಸಾಗರ ನಗರಸಭೆ ರಂಗಮಂದಿರದಲ್ಲಿ ಏರ್ಪಡಿಸಿದ್ದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಕೆ.ಸಿ.ಸತ್ಯನಾರಾಯಣ, ಪಿ.ಆರುಡಿ ಮಲ್ಲಯ್ಯ ಕಟ್ಟೇರ ಇತರರಿದ್ದರು.  
ನ್ಯೂಸ್

ಕಾಲೇಜಿನ ಸುವರ್ಣ ಮಹೋತ್ಸವಕ್ಕೆ ಕೈ ಜೋಡಿಸಿ

ಸಾಗರ: ಸರ್ಕಾರಿ ಪದವಿ ಕಾಲೇಜಿನ ಸುವರ್ಣ ಮಹೋತ್ಸವಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ನಗರಸಭೆ ರಂಗಮಂದಿರದಲ್ಲಿ ಏರ್ಪಡಿಸಿದ್ದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ, ಇಕೋ ಕ್ಲಬ್ ಸೇರಿ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟಿಸಿ ಮಾತನಾಡಿ, ನೀವು ಓದಿದ ಕಾಲೇಜಿನ ಸಂಭ್ರಮದ ಕಾರ್ಯಕ್ರಮ ಇದಾಗಿದ್ದು, ನಮ್ಮ ಕಾಲೇಜು ಎಂಬ ಹೆಮ್ಮೆ ನಿಮಗಿರಲಿ ಎಂದು ತಿಳಿಸಿದರು.

ಐದು ದಶಕಗಳ ಹಿಂದೆ ಆರಂಭಗೊಂಡ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ಮಾಡಿದ್ದಾರೆ. ಕಾಲೇಜಿನಲ್ಲಿ ಓದಿದ ಎಲ್ಲರೂ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ವಿಜೃಂಭಣೆಯಿಂದ ಸುವರ್ಣ ಸಂಭ್ರಮ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದು ಗಾಯಕ ಅರ್ಜುನ್ ಜನ್ಯ ಸಂಗೀತ ಸಂಜೆ ಕಾರ್ಯಕ್ರಮ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದರು.

ಪ್ರಾಚಾರ್ಯ ಕೆ.ಸಿ.ಸತ್ಯನಾರಾಯಣ, ಲೇಖಕ ಪಿ.ಆರುಡಿ ಮಲ್ಲಯ್ಯ ಕಟ್ಟೇರ, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ರವಿ ಲಿಂಗನಮಕ್ಕಿ, ಯೂಸೂಫ್, ಉಮೇಶ್ ಸೂರನಗದ್ದೆ, ಬಸವರಾಜ್, ಭವ್ಯಾ, ಡಾ. ಸರ್ಫ್ರಾಜ್ ಚಂದ್ರಗುತ್ತಿ ಇತರರಿದ್ದರು.