ಹೊಸನಗರ: ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಗ್ರಾಪಂ ಮಟ್ಟದಲ್ಲಿ ಜನಸ್ಪಂದನ ಸಭೆ ಮೂಲಕ ಕುಂದುಕೊರತೆ ಆಲಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ್ ಹೂವಿನಕೋಣೆ ಹೇಳಿದರು.
ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿ, ಅರ್ಹ ಫಲಾನುಭವಿಗಳಿಗೆ ತಾಂತ್ರಿಕ ಕಾರಣಗಳಿಂದ ಯೋಜನೆ ಲಾಭ ಸಿಗದಿದ್ದರೆ ಅವರಿಗೆ ಸೂಕ್ತ ಪರಿಹಾರ ಹುಡುಕಿ ಯೋಜನೆ ಸೌಲಭ್ಯ ಒದಗಿಸಬೇಕು. ಯೋಜನೆಗಳ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಆಹಾರ ಇಲಾಖೆ ಅಧಿಕಾರಿಗಳಿಗೆ ಯಾವುದೆ ಪಡಿತರ ಚೀಟಿಗಳನ್ನು ರದ್ದು ಮಾಡುವ ಮೊದಲು ಅವುಗಳನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಈಗ ಬಂದಿರುವ ಪಡಿತರವನ್ನು ಯಾವುದೆ ಕಾರಣ ನೀಡದೆ ಫಲಾನುಭವಿಗಳಿಗೆ ಹಂಚಬೇಕು ಎಂದರು.
ಜಿಲ್ಲಾ ಸಮಿತಿ ಸದಸ್ಯರಾದ ಅಮೀರ್ ಹಮ್ಜ, ಸದಸ್ಯರಾದ ಸಂತೋಷ್ ಮಳವಳ್ಳಿ, ಅನಿಲ್ ಮಾಸ್ತಿ ಕಟ್ಟೆ, ಕರುಣಾಕರ ಜೇನಿ, ನರಸಿಂಹ ಪೂಜಾರಿ, ರವಿ ಕೆರೆಹಳ್ಳಿ. ಸಿಂತಿಯ ಸೇರವೂ, ಪೂರ್ಣಿಮಾ, ಅಕ್ಷತಾ ನಾಗರಾಜ್, ಸುಮಂಗಲಾ, ಮಹೇಂದ್ರ ಇದ್ದರು.