ಆಯನೂರಿನ ದೊಡ್ಡಮತ್ಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಮಾರಂಭದಲ್ಲಿ ಮುರಳೀಧರ ಶೆಟ್ಟಿ, ವಿಷ್ಣುಮೂರ್ತಿ, ರವಿಶಂಕರ್, ರೂಪಾ, ಪ್ರಕಾಶ್ ಇತರರಿದ್ದರು.  
ನ್ಯೂಸ್

ದೊಡ್ಡಮತ್ಲಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಸೋಮಶೇಖರ ಎನ್

ಆಯನೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಸಹಯೋಗದಲ್ಲಿ ದೊಡ್ಡಮತ್ಲಿ ಗ್ರಾಮದ ವ್ಯಾಘ್ರಾಂಬಿಕ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.

ಧರ್ಮಸ್ಥಳ ಯೋಜನೆ ಜಿಲ್ಲಾ ನಿರ್ದೇಶಕ ಮುರಳೀಧರ್ ಶೆಟ್ಟಿ ಮಾತನಾಡಿ, ಗ್ರಾಮದ ಸುಭಿಕ್ಷೆ ಹಾಗೂ ಜನರಲ್ಲಿ ಸೌಹಾರ್ದ ಮೂಡಿಸಲು ಇಂತಹ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಧಾನ ಅರ್ಚಕ ವಿಷ್ಣುಮೂರ್ತಿ ಧಾರ್ಮಿಕ ಪ್ರವಚನ ನೀಡಿದರು. ಪೂಜಾ ಸಮಿತಿ ಅಧ್ಯಕ್ಷ ರವಿಶಂಕರ್, ಯೋಜನಾಧಿಕಾರಿ ರೂಪಾ, ಆದರ್ಶ, ಯಶೋದಾ, ನಾರಾಯಣಪ್ಪ, ಮರಿಯಪ್ಪ, ಮೇಲ್ವಿಚಾರಕಿ ಪೂರ್ಣಿಮಾ, ಕೃಷಿ ಮೇಲ್ವಿಚಾರಕ ಪ್ರಕಾಶ್, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಪ್ರಭಾವತಿ, ಗ್ರಾಮಸ್ಥರು ಉಪಸ್ಥಿತರಿದ್ದರು.