ಭದ್ರಾವತಿಯಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಎಸ್.ದತ್ತಾತ್ರಿ ಉದ್ಘಾಟಿಸಿದರು. ಜಿ.ಧರ್ಮಪ್ರಸಾದ್, ಎಚ್.ಕೆ.ತೀರ್ಥಯ್ಯ, ಡಾ. ವೀಣಾ ಭಟ್, ಡಾ. ಆಶಾ ಇತರರಿದ್ದರು.  
ನ್ಯೂಸ್

ಮೋದಿ ನಾಯಕತ್ವಕ್ಕೆ ವಿಶ್ವದೆಲ್ಲೆಡೆ ಮೆಚ್ಚುಗೆ

ಭದ್ರಾವತಿ: ವಿಶ್ವದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅವರ ಕಾರ್ಯವೈಖರಿ ಸಾಮಾನ್ಯ ಕಾರ್ಯಕರ್ತನಿಗೂ ಮಾದರಿ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಸೇವಾ ಪಾಕ್ಷಿಕದಡಿ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ ಸೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ರಾಜಕೀಯದ ಜತೆಗೆ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಲು ನರೇಂದ್ರ ಮೋದಿ ಮುಂದಾಳತ್ವದಲ್ಲಿ ಹೆಜ್ಜೆ ಇಟ್ಟಿದೆ. ಸ್ವಚ್ಛ ಭಾರತ, ಸ್ವದೇಶಿ ಭಾರತ, ಆತ್ಮನಿರ್ಭರ ಭಾರತ ಅಂದೋಲನದ ಮೂಲಕ ದೇಶೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವುದು. ಮಹಿಳೆಯರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಸ್ವಸ್ಥ ನಾರಿ- ಸಶಕ್ತ ಭಾರತ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಡಾ. ವೀಣಾ ಭಟ್ ಮಾತನಾಡಿ, ಮಹಿಳೆಯರು ಆರ್ಥಿಕ ಸಬಲೀಕರಣದತ್ತ ಮುನ್ನಡೆದಿದ್ದು, ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸುತ್ತಿದ್ದಾರೆ. ಒತ್ತಡದ ಜೀವನಶೈಲಿಯಲ್ಲಿ ಆರೋಗ್ಯದ ಕಡೆಗೂ ಕಾಳಜಿ ವಹಿಸಬೇಕು ಎಂದರು.

ನಗರ ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಕೆ.ತೀರ್ಥಯ್ಯ, ಡಾ. ಸಾಹಿತ್ಯಾ, ಡಾ. ಬಸವರಾಜ್, ಡಾ. ಆಶಾ, ಎಸ್.ರಾಜಶೇಖರ್, ಕಾ.ರಾ.ನಾಗರಾಜ್, ಯೋಗೇಶ್ ಪೂಜಾರ್ ಇತರರಿದ್ದರು.