ಆನಂದಪುರ ಸಮೀಪದ ತುಪ್ಪೂರಿನ ಕೊರಗಿ ಗ್ರಾಮದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಪ್ರೊ. ಕೆ.ಸಿ.ವಿರಣ್ಣ ಮಾತನಾಡಿದರು. ಕೃಷ್ಣಮೂರ್ತಿ, ಪ್ರೊ. ಪ್ರಕಾಶ್ ನಡೂರ್ ಇತರರಿದ್ದರು.  
ನ್ಯೂಸ್

ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್ ಪೂರಕ

ಆನಂದಪುರ: ಯುವಜನರ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ ಎಂದು ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದ ಕುಲಪತಿ ಪ್ರೊ. ಕೆ.ಸಿ.ವೀರಣ್ಣ ಹೇಳಿದರು.

ತುಪ್ಪೂರು ಸಮೀಪದ ಕೊರಗಿ ಗ್ರಾಮದಲ್ಲಿ ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯಯದಿಂದ ಆಯೋಜಿಸಿದ್ದ ಎನ್‌ಎಸ್‌ಎಸ್ ಘಟಕದ ವಿಶೇಷ ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಶಿಬಿರಗಳಿಂದ ವಿದ್ಯಾರ್ಥಿಗಳಿಗೆ ಪರಿಸರ, ವೈಯಕ್ತಿಕ ಸ್ವಚ್ಛತೆ, ವೈಜ್ಞಾನಿಕ ಕೃಷಿ, ಪಶುಪಾಲನೆ ಸೇರಿ ವೈವಿಧ್ಯ ವಿಷಯಗಳ ಬಗ್ಗೆ ಅರಿವು ಮೂಡುತ್ತದೆ ಎಂದು ತಿಳಿಸಿದರು.

ತುಪ್ಪೂರು ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಶಿಬಿರಗಳ ಮೂಲಕ ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳುತ್ತಾರೆ. ಇದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಮಹಾವಿದ್ಯಾಲಯ ಡೀನ್ ಪ್ರೊ. ಪ್ರಕಾಶ್ ನಡೂರ್, ತುಪ್ಪೂರು ಗ್ರಾಪಂ ಸದಸ್ಯರಾದ ಗೀತಾ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್, ಮಹಿಳಾ ಸಂಘಗಳ ಒಕ್ಕೂಟದ ಅಧ್ಯಕ್ಷೆ ಮಾನಸಾ, ಶಾಲಾ ಶಿಕ್ಷಕ ಹರೀಶ್ ಇತರರಿದ್ದರು.