ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ಪ್ರಾಚಾರ್ಯ ಡಾ. ವಿರೂಪಾಕ್ಷಪ್ಪ ಉದ್ಘಾಟಿಸಿದರು. ಡಾ. ಆರ್.ಕೆ.ರಾಜು, ಡಾ. ಎನ್.ಎಸ್.ರವೀಶ್, ಸಿ.ರಾಕೇಶ್ ಇತರರಿದ್ದರು. 
ನ್ಯೂಸ್

ವಿದ್ಯಾರ್ಥಿಗಳ ಜ್ಞಾನ ವೃದ್ಧಿಸುವ ರಸಪ್ರಶ್ನೆ ಸ್ಪರ್ಧೆ

ರಿಪ್ಪನ್‌ಪೇಟೆ: ವಿದ್ಯಾರ್ಥಿಗಳ ಜ್ಞಾನ ವೃದ್ಧಿಸಲು ರಸಪ್ರಶ್ನೆ ಕಾರ್ಯಕ್ರಮ ಸಹಕಾರಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ವಿರೂಪಾಕ್ಷಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ಪಿಯು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ವಿಶೇಷ ಕಾರ್ಯಕ್ರಮ ನಡೆಸುತ್ತಿದ್ದು ಪರೀಕ್ಷೆಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.

ಗರ್ತಿಕೆರೆ, ಕೋಣಂದೂರು, ಆನಂದಪುರ ಹಾಗೂ ರಿಪ್ಪನ್‌ಪೇಟೆ ಪಿಯು ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಐಕ್ಯೂಎಸಿ ಸಂಚಾಲಕ ಡಾ. ಆರ್.ಕೆ.ರಾಜು, ಸಹಸಂಚಾಲಕ ಡಾ. ಎನ್.ಎಸ್.ರವೀಶ್, ವಾಣಿಜ್ಯಶಾಸ್ತ್ರ ವಿಭಾಗದ ಸಿ.ರಾಕೇಶ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಬಿ.ಎಲ್.ರಾಜು, ಆಯ್ಕೆ ಶ್ರೇಣಿ ಗ್ರಂಥಪಾಲಕ ಡಾ. ಎಸ್.ಟಿ.ರಜಿಕಾಂತ್ ಉಪಸ್ಥಿತರಿದ್ದರು.