ಸೊರಬ: ಸಮಾಜದ ಎಲ್ಲ ವರ್ಗದವರನ್ನು ಒಗ್ಗೂಡಿಸಿ ಪ್ರೋತ್ಸಾಹಿಸುತ್ತಿರುವ ಸಂಸ್ಥೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂದು ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಸೊರಬ ಹಾಗೂ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ವರಮಹಾಲಕ್ಷ್ಮೀ ಪೂಜೆ ಮತ್ತು ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ಕಾಯಕ್ರಮಗಳ ಮೂಲಕ ಮಹಿಳೆಯರು ಸಬಲರಾಗಿದ್ದಾರೆ. ಶಿಕ್ಷಣ ಹಾಗೂ ಆರೋಗ್ಯ ಯೋಜನೆಯಡಿ ಸಂಘದ ಸದಸ್ಯರಿಗೆ ಸಹಾಯ ಹಸ್ತ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ವಾರ್ಷಿಕೋತ್ಸವ ಪ್ರಯುಕ್ತ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಲಾಯಿತು. ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಜಿಲ್ಲಾ ನಿರ್ದೇಶಕ ಎಂ.ದಿನೇಶ್, ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ, ಸದಸ್ಯ ಮಧುರಾಯ್ ಜಿ.ಶೇಟ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಳಿಂಗರಾಜ್, ಎಎಸ್‌ಐ ಧರ್ಮರಾಯ, ಜ್ಞಾನವಿಕಾಸ ಸಮಾನ್ವಯಧಿಕಾರಿ ಪ್ರಭಾವತಿ, ಮೇಲ್ವಿಚಾರಕ ಉಮೇಶ್, ಕೆರೆಯಪ್ಪ ಇತರರಿದ್ದರು.