ಸಾಗರ: ಲಯನ್ಸ್ ಕ್ಲಬ್ ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದು ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಸ್ವಪ್ನಾ ಸುರೇಶ್ ಹೇಳಿದರು.
ಲಯನ್ಸ್ ಸೇವಾ ಮಂದಿರದಲ್ಲಿ ಏರ್ಪಡಿಸಿದ್ದ ಲಯನ್ಸ್ ಕ್ಲಬ್ ಸಾಗರ ಶ್ರೀಗಂಧ ಸಂಸ್ಥೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶ್ರೀಗಂಧ ಉದಯೋತ್ಸವ ಉದ್ಘಾಟಿಸಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಕಾರ್ಯಾಗಾರ, ಶಿಬಿರಗಳನ್ನು ಆಯೋಜಿಸುವ ಮೂಲಕ ಸೇವಾ ಕಾರ್ಯ ನಡೆಸುತ್ತಿದೆ ಎಂದು ತಿಳಿಸಿದರು.
ಪರಿಸರ ಜಾಗೃತಿ, ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರಿನ ಘಟಕ, ಬೀದಿಬದಿ ವ್ಯಾಪಾರಿಗಳಿಗೆ ನೆರವು, ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಸಹಾಯ ಸೇರಿ ವಿವಿಧ ಸೇವಾ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
ಲಯನ್ಸ್ ಕ್ಲಬ್ ಸಾಗರ ಶ್ರೀಗಂಧ ಸಂಸ್ಥೆ ಅಧ್ಯಕ್ಷೆಯಾಗಿ ಸರಸ್ವತಿ ನಾಗರಾಜ್, ಕಾರ್ಯದರ್ಶಿಯಾಗಿ ಶೈಲೇಶ್, ಖಜಾಂಚಿಯಾಗಿ ಅಕ್ಷಯಕುಮಾರ್ ಅಧಿಕಾರ ಸ್ವೀಕರಿಸಿದರು. ಸಂಸ್ಥೆಗೆ ನೂತನವಾಗಿ 21 ಸದಸ್ಯರು ಸೇರ್ಪಡೆಯಾದರು.
ನೂತನ ಅಧ್ಯಕ್ಷೆ ಸರಸ್ವತಿ ನಾಗರಾಜ್ ಮಾತನಾಡಿ, ಸೇವೆಗೆ ಹೆಚ್ಚು ಒತ್ತು ನೀಡಲಾಗುವುದು. ಮುಂದಿನ ದಿನಗಳಲ್ಲಿ ಹೆಚ್ಚು ಸೇವಾ ಚಟುವಟಿಕೆಗಳನ್ನು ಆಯೋಜಿಸಲಾಗುವುದು ಎಂದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ಟಿ.ಪ್ರಸನ್ನ ಮಾತನಾಡಿದರು. ಜಿಲ್ಲಾ ಮಾಜಿ ಗವರ್ನರ್ ಡಾ. ಎಂ.ಕೆ.ಭಟ್, ರಾಜೀವ್ ಕೋಟ್ಯಾನ್, ಹರಿಪ್ರಸಾದ್ ರೈ, ಡಾ. ಬಿ.ಎಸ್.ನಾಗಪ್ರಕಾಶ್, ಡಾ. ಟಿ.ಬಸವರಾಜ, ಎಚ್.ಎನ್.ಶಿವಕುಮಾರ್, ದಿವಾಕರ ಶೆಟ್ಟಿ, ಡಾ. ಎಸ್.ಐ.ಬಿರಾದಾರ್, ಆರ್.ಜಿ.ಶ್ರೀನಿವಾಸಮೂರ್ತಿ, ಅಶ್ವಿನಿಕುಮಾರ್, ಎನ್.ಆರ್.ವಿನಯ್, ಎಸ್.ಪ್ರಕಾಶ್, ಎಂ.ವಿನಯಕುಮಾರ್, ಕೆ.ಬಿ.ಮಹಾಬಲೇಶ್, ಎನ್.ಆರ್.ವಿನಯ್ ಇತರರಿದ್ದರು.