ನ್ಯೂಸ್

ಆಪತ್ಕಾಲ ಗೆದ್ದು ಬಂದ ಶಿವಣ್ಣ! ಯಶಸ್ವಿ ಶಸ್ತ್ರಚಿಕಿತ್ಸೆ ನಂತ್ರ ಬೆಂಗಳೂರಿಗೆ ಬಂದಿಳಿದ್ರು shivarajkumar

Webdesk - Savina Naik

ಬೆಂಗಳೂರು: ( shivarajkumar ) ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಇಂದು (ಜ 26) ಶಿವಣ್ಣ ತಾಯ್ನಾಡಿಗೆ ಬಂದಿಳಿದಿದ್ದಾರೆ.

ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿ ಶಿವಣ್ಣ ಆ ರೋಗವನ್ನು ಮಣಿಸಿ ಗೆದ್ದು ಚೇತರಿಸಿಕೊಂಡಿದ್ದಾರೆ. ಅದರ ಚಿಕಿತ್ಸೆಗಾಗಿಯೇ ಕೆಲವು ದಿನಗಳ ಹಿಂದೆ ಅಮೆರಿಕಾಗೆ ತೆರಳಿದ್ದ ಶಿವರಾಜ್​ಕುಮಾರ್, ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಈ ಹಿನ್ನೆಲೆ  ಬೆಂಗಳೂರಿಗೆ ಶಿವರಾಜ್​ಕುಮಾರ್  ಆಗಿದ್ದಾರೆ.

ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಡಿ.18 ರಂದು ಅಮೆರಿಕಕ್ಕೆ ತೆರಳಿದ್ದರು. ಬಳಿಕ ಡಿ.34 ರಂದು ಆಪರೇಷನ್‌ಗೆ ಒಳಗಾಗಿದ್ದು, ಇದೀಗ ಸಂಪೂರ್ಣ ಗುಣಮುಖರಾಗಿ ತಾಯ್ನಾಡಿಗೆ ಮರಳಿದ್ದಾರೆ.

ಅಮೆರಿಕದಿಂದ ದುಬೈಗೆ ಬಂದಿಳಿದು, ಅಲ್ಲಿಂದ ಕನೆಕ್ಟೆಡ್ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಿಗ್ಗೆ 9ರ ಆಸುಪಾಸಿನಲ್ಲಿ ಬೆಂಗಳೂರಿನ ಏರ್ಪೋಟ್‌ನಲ್ಲಿ ಲ್ಯಾಂಡ್ ಆಗಿದ್ದು, ವಿಮಾನ ನಿಲ್ದಾಣದ ಪ್ರಕ್ರಿಯೆಗಳನ್ನು ಮುಗಿಸಿ ಆಗಮನ ಗೇಟ್ 1ರಲ್ಲಿ ಹೊರಬಂದಿದ್ದಾರೆ.