ವಾರಣಾಸಿ: 17 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಹರಿಬಿಟ್ಟ ಆಘಾತಕಾರಿ ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.
ವಾರಣಾಸಿಯ ದಶಾಶ್ವಮೇಘ ಘಾಟ್‌ನಲ್ಲಿ ಗಂಗಾ ಆರತಿಯಲ್ಲಿ ಭಾಗವಹಿಸಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ 17ರ ಬಾಲಕಿಯನ್ನು ಅಪಹರಿಸಿದ ನಾಲ್ವರು ಯುವಕರ ಗುಂಪೊಂದು ಆಕೆ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದರು.
ಮೇ 19ರಂದು ನಡೆದ ಈ ಭೀಕರ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆದ ನಂತರ ಬಾಲಕಿಯ ಸಂಬಂಧಿಕರಿಗೆ ಹಾಗೂ ಕುಟುಂಬದವರಿಗೆ ಬಾಲಕಿಯ ಮೇಲಿನ ದೌರ್ಜನ್ಯದ ಬಗ್ಗೆ ತಿಳಿದು ಬಂದಿದೆ. ಈ ಕುರಿತು ಎಫ್ಐಆರ್ ದಾಖಲಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.(ಏಜೆನ್ಸೀಸ್)