Disha Patani : ಬಾಲಿವುಡ್ ನಾಯಕಿ ದಿಶಾ ಪಟಾನಿ ಅವರ ಮನೆಯ ಮುಂದೆ ಶುಕ್ರವಾರ ಬೆಳಿಗ್ಗೆಯೇ ಗುಂಡಿನ ದಾಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಬರೇಲಿಯಲ್ಲಿರುವ ಅವರ ನಿವಾಸದಲ್ಲಿ ಈ ಸಂಭವಿಸಿದೆ. ಆದರೆ, ಗುಂಡಿನ ದಾಳಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ದಿಶಾ ಪಟಾನಿ ಅವರ ಸಹೋದರಿ ಖುಷ್ಬೂ ಪಟಾನಿ ಮಾಡಿದ ಹೇಳಿಕೆಗಳು ಒಂದು ಗುಂಪಿನ ಭಾವನೆಗಳಿಗೆ ನೋವುಂಟು ಮಾಡಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಇದೇ ದಾಳಿಗೆ ಕಾರಣ ಎಂದು ಸ್ಥಳೀಯರು ಕೂಡ ನಂಬಿದ್ದಾರೆ ಎಂದು ವರದಿ ಉಲ್ಲೇಖಿಸಿದ್ದಾರೆ.
ಗೋಲ್ಟಿ ಬ್ರಾರ್ ಗ್ಯಾಂಗ್ ಈ ಗುಂಡಿನ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ. ಇದು ಬಾಲಿವುಡ್ ಮಾಧ್ಯಮಗಳಲ್ಲಿಯೂ ವರದಿಯಾಗಿದೆ. ಆದರೆ, ಪೊಲೀಸರು ಇದನ್ನು ಇನ್ನೂ ದೃಢಪಡಿಸಿಲ್ಲ. ದಿಶಾ ಪಟಾನಿ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೊಣೆ ಹೊತ್ತುಕೊಂಡಿರುವ ಗೋಲ್ಡಿ ಬ್ರಾರ್ ಹಾಗೂ ರೋಹಿತ್ ಗೋದಾರ ಸೋಶಿಯಲ್ ಮೀಡಿಯಾ ಪೋಸ್ಟ್ ಹೇಳಿಕೊಂಡಿದೆ. ಇದು ಬಾಲಿವುಡ್ ಸೆಲೆಬ್ರೆಟಿಗಳಿಗೆ ಎಚ್ಚರಿಕೆ ಸಂದೇಶ ಎಂದಿದ್ದಾರೆ.