ಮುತ್ತಪ್ಪ ರೈ ಚಿತೆಗೆ ಅಗ್ನಿಸ್ಪರ್ಶ ಮಾಡಿದ ಕಿರಿಯ ಮಗ ರಿಕ್ಕಿ ರೈ 
ನ್ಯೂಸ್

ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು: 7 ಜನರ ಬಂಧನ

ರಾಮನಗರ: ಮುತ್ತಪ್ಪ ರೈ ಅಂತ್ಯ ಸಂಸ್ಕಾರದ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ 6 ಖಾಸಗಿ ಗನ್ ಮ್ಯಾನ್​ಗಳನ್ನು ಮತ್ತು ಒಬ್ಬ ಸಹಚರನನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ಸಂಜೆ ಬಿಡದಿಯ ಅವರ ಮನೆ ಸಮೀಪವೇ ಮುತ್ತಪ್ಪ ರೈ ಅವರ ಅಂತ್ಯ ಸಂಸ್ಕಾರ ನಡೆದಿತ್ತು.

ಮುತ್ತಪ್ಪ ರೈ ಅವರಿಗೆ ಗನ್ ಮ್ಯಾನ್ ಗಳಾಗಿ ಕೆಲಸ ನಿರ್ವಹಿಸುತ್ತಿದ್ದ ಖಾಸಗಿ ಭದ್ರತಾ ಸಂಸ್ಥೆಯ ಸಿಬ್ಬಂದಿ ಗೌರವ ಸೂಚಕವಾಗಿ ೫ ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು.

ಈ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡು 7 ಮಂದಿಯನ್ನು ಬಂಧಿಸಿದ್ದಾರೆ. ಜತೆಗೆ ಡಬಲ್‌ ಬ್ಯಾರಲ್ ಗನ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೋನಪ್ಪ, ಗಿರೀಶ್, ಲಕ್ವಿರ್ ಸಿಂಗ್, ಚಾತರ್ ಸಿಂಗ್, ರಂಜಿತ್ ರೈ, ಸುನಿಲ್ ಬಂಧಿತ ಗನ್ ಮ್ಯಾನ್ ಗಳು. ಬಂಧಿತ ಸಹಚರನ ಹೆಸರು ಪ್ರಕಾಶ್ ರೈ ಎಂದು ಪೊಲೀಸರು ತಿಳಿಸಿದ್ದಾರೆ.