ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ಗೆ ಇಂದು ನೋಟಿಸ್ ಜಾರಿಯಾಗಿದೆ. ಎಐಸಿಸಿ ಶಿಸ್ತುಪಾಲನಾ ಸಮಿತಿ ಈ ನೋಟಿಸ್ ಜಾರಿ ಮಾಡಿದೆ.
ಕಳೆದ ಶನಿವಾರ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್ ಬಹಿರಂಗ ವಾಗ್ದಾಳಿ ನಡೆಸಿದ್ದರು. ದೇವರಾಜ ಅರಸು ಕಾರಿನಲ್ಲಿ ಹೋದ ತಕ್ಷಣ ದೇವರಾಜು ಅರಸು ಆಗುವುದಿಲ್ಲ ಎಂಬಿತ್ಯಾದಿ ಹೇಳಿಕೆಗಳ ಮೂಲಕ ಅವರು ವಾಗ್ದಾಳಿ ನಡೆಸಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್ಫರ್’ ಅಸಾಧ್ಯ ಅನಿಸುತ್ತೆ!
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಶಿಸ್ತುಪಾಲನಾ ಸಮಿತಿಯಿಂದ ಬಿ.ಕೆ. ಹರಿಪ್ರಸಾದ್ಗೆ ಇಂದು ನೋಟಿಸ್ ಜಾರಿ ಆಗಿದೆ. ಬಿಜೆಪಿ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರಿಂದ ವೇದಿಕೆಯಲ್ಲಿ ಭಾಗಿಯಾಗಿ, ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಕಾರಣ ನೀಡಿ ಹತ್ತು ದಿನಗಳ ಒಳಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.