ರಿಪ್ಪನ್‌ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ ಶ್ರಾವಣ ಶುಕ್ರವಾರ ಅಂಗವಾಗಿ ಶ್ರೀ ಪದ್ಮಾವತಿ ದೇವಿಯ ವಿಶೇಷ ಪೂಜೆಯಲ್ಲಿ ವರೂರು ಜೈನ ಮಠದ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಸ್ವಾಮೀಜಿ, ಹೊಂಬುಜ ಜೈನಮಠದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಪಾಲ್ಗೊಂಡಿದ್ದರು. 
ನ್ಯೂಸ್

ಹೊಂಬುಜದಲ್ಲಿ ಶ್ರಾವಣ ವಿಶೇಷ ಪೂಜೆ

ರಿಪ್ಪನ್‌ಪೇಟೆ: ಹೊಂಬುಜ ಜೈನಮಠದ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರಾವಣ ಮಾಸದ ತೃತೀಯ ಶುಕ್ರವಾರ ವಿಶೇಷ ಅಲಂಕಾರ ಹಾಗೂ ವಾದ್ಯಗೋಷ್ಠಿಯೊಂದಿಗೆ ಶೋಡಷೋಪಚಾರ ಪೂಜೆ, ಪರಂಪರಾನುಗತ ಆಗಮೋಕ್ತ ವಿಧಾನಗಳು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ನೆರವೇರಿದವು.

ಭಕ್ತಿ ಸಮರ್ಪಣೆಯಿಂದ ಜಗನ್ಮಾತೆ ಸಂತುಷ್ಟಿ ಹೊಂದಿ ಇಷ್ಟಾರ್ಥ ಸಿದ್ಧಿಗಾಗಿ ಸ್ವಇಚ್ಛೆ ಸೇವೆಯು ಫಲಿಸಲಿ ಎಂದು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವದಿಸಿದರು. 108 ವಿವಿಧ ಭಕ್ಷ್ಯಗಳನ್ನು ಶ್ರೀ ಪದ್ಮಾವತಿ ದೇವಿಗೆ ಅರ್ಪಿಸಿದರು.ಪೂಜ್ಯ ಆರ್ಯಿಕಾ 105 ಶಿವಮತಿ ಮಾತಾಜಿ, ವರೂರು ಜೈನ ಮಠದ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಸ್ವಾಮೀಜಿ ಉಪಸ್ಥಿತರಿದ್ದರು. ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಭಕ್ತರು ಕ್ಷೇತ್ರದ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ನೇಮಿನಾಥ ಸ್ವಾಮಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಸರಸ್ವತಿ ದೇವಿ ಹಾಗೂ ಶ್ರೀ ಕ್ಷೇತ್ರಪಾಲ ದೇವರಿಗೆ ಪೂಜೆ ಸಲ್ಲಿಸಿದರು.