ನ್ಯೂಸ್

ಡಾ. ವೀರೇಂದ್ರ ಹೆಗ್ಗಡೆಯವರಿಗೆ ರಾಖಿ ಕಟ್ಟಿದ ನಟಿ ಶ್ರುತಿ; ಫೋಟೋಗಳು ವೈರಲ್

ಬೆಂಗಳೂರು: ಸ್ಯಾಂಡಲ್​​ವುಡ್​ ನಟಿ ಶ್ರುತಿ ಶ್ರೀ ಮಂಜುನಾಥ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.  ಈ ವೇಳೆ ರಕ್ಷಾ ಬಂಧನದ ನಿಮಿತ್ತ ಶ್ರೀ ಕ್ಷೇತ್ರ ಧರ್ಮಾಧಿಕಾರಿಯಾಗಿರುವ ವಿರೇಂದ್ರ ಹೆಗ್ಗಡೆ ಅವರಿಗೆ ರಾಖಿ ಕಟ್ಟಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ಪೂಜ್ಯರ ಆಶೀರ್ವಾದ ಪಡೆದು, ನಿನ್ನೆ ರಕ್ಷಾ ಬಂಧನದ ದಿನ ಅವರಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ್ ನಿಮ್ಮೆಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಇನ್​ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡಿದ್ದಾರೆ.

ಶೃತಿ ಅವರು ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಪುತ್ರಿ ಗೌರಿ ಜೊತೆಗೆ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಮಂಜುನಾಥನ ದರ್ನ ಪಡೆದುಕೊಂಡು ಅದರ ಜೊತೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರನ್ನೂ ಸಹ ಭೇಟಿಯಾಗಿದ್ದಾರೆ.ರಕ್ಷಾ ಬಂಧನದ ಹಿನ್ನೆಲೆಯಲ್ಲಿ ನಟಿ ಶ್ರುತಿ ವೀರೇಂದ್ರ ಹೆಗ್ಗಡೆಯವರ ಕೈಗೆ ರಾಖಿ ಕಟ್ಟಿ ಆಶೀರ್ವಾದ ಪಡೆಯುವ ಮೂಲಕ ವಿಶೇಷವಾಗಿ ರಕ್ಷಾಬಂಧನವನ್ನ ಆಚರಿಸಿದ್ದಾರೆ.

ಸದ್ಯ ನಟಿ ಶ್ರುತಿ ಅವರು ಗಿಚ್ಚಿ ಗಿಲಿಗಿಲಿ  ಜಡ್ಜ್ ಆಗಿ ಕನ್ನಡ ಕಿರುತೆರೆಯಲ್ಲಿ ಮನೆ ಮಾತಾಗಿದ್ದಾರೆ. ಕೆಲವು ಸಿನಿಮಾಗಳಲ್ಲಿಯೂ ಶ್ರುತಿ ತೊಡಗಿಕೊಂಡಿದ್ದಾರೆ.