ನ್ಯೂಸ್

ISS ನಿಂದ ಸೆರೆಹಿಡಿಯಲಾದ ಭಾರತದ ವಿಡಿಯೋ ಹಂಚಿಕೊಂಡ 'ಶುಭಾಂಶು ಶುಕ್ಲಾ'| timelapse

ನವದೆಹಲಿ: ಶುಭಾಂಶು ಶುಕ್ಲಾ ಇತ್ತೀಚೆಗೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಸೆರೆಹಿಡಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ದುರದೃಷ್ಟವಶಾತ್ ನಾನು ಮಳೆಗಾಲದಲ್ಲಿ ಅಲ್ಲಿಗೆ ಹೋಗಿದ್ದೆ ಮತ್ತು ಹೆಚ್ಚಾಗಿ ಸ್ಥಳದಲ್ಲಿ ಮೋಡ ಕವಿದಿತ್ತು, ಆದರೂ ನಾನು ಭಾರತ್ದ ಕೆಲವು ಫೋಟೋಗಳನ್ನು ತೆಗೆಯುವಲ್ಲಿ ಯಶಸ್ವಿಯಾದೆ ಎಂದು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಶುಕ್ಲಾ ಹಂಚಿಕೊಂಡಿದ್ದಾರೆ.

ಈ ವಿಡಿಯೋ ಭಾರತದ ಟೈಮ್‌ಲ್ಯಾಪ್ಸ್ ಆಗಿದ್ದು, ಹಿಂದೂ ಮಹಾಸಾಗರದಿಂದ ಭಾರತದ ಪೂರ್ವ ಕರಾವಳಿಯುದ್ದಕ್ಕೂ ವಿಡಿಯೋವನ್ನು ಸೆರೆ ಹಿಡಿಯಲಾಗಿದೆ. ಈ ದೃಶ್ಯಾವಳಿಗಳಲ್ಲಿ ಹಿಮಾಲಯ ಮತ್ತು ಗುಡುಗು ಸಹಿತ ಮಳೆಯಿಂದ ಉಂಟಾದ ಮಿಂಚನ್ನು ನೋಡಬಹುದಾಗಿದೆ. ನಕ್ಷತ್ರಗಳಿಂದ ತುಂಬಿದ ಆಕಾಶ ಹಾಗೂ ಮುಂದೆ ಸಾಗಿದಂತೆ ಅದ್ಭುತ ಸೂರ್ಯೋದಯವನ್ನು ಸಹ ಈ ವಿಡಿಯೋದಲ್ಲಿ ಗಮನಿಸಬಹುದಾಗಿದೆ.

ಅಂದಹಾಗೆ, ಐತಿಹಾಸಿಕ ಬಾಹ್ಯಾಕಾಶ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 15ರಂದು ಭೂಮಿಗೆ ಬಂದಿಳಿದರು. ಆಕ್ಸಿಯಮ್​-4 ಸಿಬ್ಬಂದಿಯನ್ನು ಹೊತ್ತ ಸ್ಪೇಷ್​ ಎಕ್ಸ್​ ಗ್ರೇಸ್​ ಕ್ಪಾಪ್ಸುಲ್​ ಸ್ಯಾನ್​ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಯಶಸ್ವಿಯಾಗಿ ಇಳಿಯಿತು.

(ಏಜೆನ್ಸೀಸ್)

ಭಾರತೀಯ ವಾಯುಪಡೆಯ ಪೈಲಟ್ ಆಗಿರುವ ಗ್ರೂಪ್ ಕ್ಯಾಪ್ಟನ್ ಶುಕ್ಲಾ, 1984 ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾರ ಬಳಿಕ ಬಾಹ್ಯಾಕಾಶಕ್ಕೆ ಭೇಟಿ ನೀಡಿದ ಎರಡನೇ ಭಾರತೀಯನೆಂಬ ದಾಖಲೆ ಸೃಷ್ಟಿಸಿದ್ದಾರೆ. ಈ ಕಾರ್ಯಾಚರಣೆಗೆ ಭಾರತ ಸುಮಾರು 70 ಮಿಲಿಯನ್ ಡಾಲರ್​ ವ್ಯಯಿಸಿದೆ. ಈ ಒಂದು ಐತಿಹಾಸಿಕ ಭೇಟಿಗೆ ನಾಸಾ ಮತ್ತು ಇಸ್ರೋಗೆ ಮಧ್ಯವರ್ತಿಯಾಗಿ ಖಾಸಗಿ ಬಾಹ್ಯಾಕಾಶ ಕಂಪನಿ ಆಕ್ಸಿಯಮ್ ಸ್ಪೇಸ್ ಕೆಲಸ ಮಾಡಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದೊಂದಿಗೆ ಡಾಕಿಂಗ್ ಮಾಡಿದಾಗಿನಿಂದ ಸುಮಾರು 12.2 ಮಿಲಿಯನ್ ಕಿಲೋಮೀಟರ್‌ಗಳನ್ನು ಕ್ರಮಿಸಿ ಭೂಮಿಯ ಸುತ್ತ ಸರಿಸುಮಾರು 433 ಗಂಟೆಗಳು, 18 ದಿನಗಳು ಮತ್ತು 288 ಕಕ್ಷೆಗಳನ್ನು ಸುತ್ತಿದ ಬಳಿಕ ಆಕ್ಸಿಯಮ್ ಮಿಷನ್ 4 (ಆಕ್ಸ್-4) ಸಿಬ್ಬಂದಿ ಮನೆಗೆ ಮರಳಿದ್ದಾರೆ.