ನ್ಯೂಸ್

ಎಸ್‌ಐ ದೋಷಮುಕ್ತ ಆದೇಶ ಪುರಸ್ಕೃತ

Bengaluru - General - Pavithra Kundapur

ಬೆಂಗಳೂರು: ಐಎಂಎ ಹಗರಣದ ಸಂಬಂಧ ಸಬ್ ಇನ್‌ಸ್ಪೆಕ್ಟರ್ ಗೌರಿಶಂಕರ್ ಅವರನ್ನು ಕ್ರಿಮಿನಲ್ ಪ್ರಕರಣದಿಂದ ಆರೋಪಮುಕ್ತಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಶುಕ್ರವಾರ ಹೈಕೋರ್ಟ್ ಎತ್ತಿಹಿಡಿದಿದೆ.

ವಿಚಾರಣಾ ನ್ಯಾಯಾಲಯ ಗೌರಿಶಂಕರ್ ಅವರನ್ನು ದೋಷಮುಕ್ತಗೊಳಿಸಿ 2024ರ ಜು.15ರಂದು ನೀಡಿದ್ದ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ಘಟನೆ ನಡೆದಾಗ ಆರೋಪಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿದ್ದರು. ಅವರನ್ನು ಆರೋಪಮುಕ್ತಗೊಳಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಆದೇಶ ಸಮಂಜಸವಾಗಿದೆ ಮತ್ತು ಅದು ಸುಪ್ರೀಂಕೋರ್ಟ್ ನೀಡಿರುವ ಆದೇಶಗಳಿಗೆ ಅನುಸಾರವಾಗಿಯೇ ಇದೆ. ಹಾಗಾಗಿ ಆ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ.

ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಹೈಕೋರ್ಟ್, ಗೌರಿಶಂಕರ್ ವಿರುದ್ಧದ ಎ್ಲ ಆರೋಪಗಳನ್ನು ಪರಿಶೀಲಿಸಿದರೆ, ಡೈರಿಯಲ್ಲಿ ಗೌರಿ-ವಸೀಂ ಭಾಯ್ ಎನ್ನುವ ಪದ ಎಕ್ಸೆಲ್ ಶೀಟ್‌ನಲ್ಲಿ ನಮೂದಾಗಿರುವುದು ಬಿಟ್ಟರೆ ಬೇರೆ ಯಾವುದೇ ಸಾಕ್ಷ್ಯಗಳು ಎಸ್‌ಐ ವಿರುದ್ಧ ಇಲ್ಲ. ಹಾಗಾಗಿ ಅವರ ವಿರುದ್ಧದ ಪ್ರಕರಣ ರದ್ದುಗೊಳಿಸಲಾಗುತ್ತಿದೆ ಎಂದು ಹೇಳಿದೆ.