ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಜೂನ್ 01ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತ್ತಿದ್ದು, ಯೋಜನೆಯ ಲಾಭ ಪಡೆಯಲು ಸರ್ಕಾರ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಿದೆ.
ಇನ್ನು ಯೋಜನೆಗಳ ಅನುಷ್ಠಾನದ ಕುರಿತು ನಡೆದ ಸಭೆಯಲ್ಲಿ ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಪ್ರಕ್ರಿಯೆ ಅತ್ಯಂತ ಸರಳವಾಗಿರಲಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ಧಾರೆ.
ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಕುಂಟು ನೆಪ ನೀಡಿ ಅರ್ಜಿ ತಿರಸ್ಕರಿಸುವಂತಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ಧಾರೆ. ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸುವ ಸಲುವಾಗಿ ತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ ನ ಸಾಮರ್ಥ್ಯ ವೃದ್ಧಿಸುವಂತೆ, ಗೃಹ ಜ್ಯೋತಿ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಲು. ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪಲೈನ್ ಡೆಸ್ಕ್ ಸ್ಥಾಪನೆಗೆ ಸಿಎಂ ಸೂಚಿಸಿದ್ಧಾರೆ.
ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್ ಸೌಲಭ್ಯ ನೀಡಲು ಸಭೆಯಲ್ಲಿ ಸಿಎಂ ಸೂಚನೆಗಳನ್ನು ನೀಡಿದ್ದಾರೆ. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್ ಸೌಲಭ್ಯ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಆಗಸ್ಟ್ 1 ರಂದು ಗೃಹಜ್ಯೋತಿ, ಆಗಸ್ಟ್ 17-18 ರಂದು ಗೃಹಲಕ್ಷ್ಮಿ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಯಾರಿ ನಡೆಸುವಂತೆ ಸೂಚಿಸಿದ್ಧಾರೆ ಎಂದು ವರದಿಯಾಗಿದೆ.