ನ್ಯೂಸ್

ಮಾಜಿ ಸಚಿವ ಎಚ್.ಎಂ.ರೇವಣ್ಣ ಮಗನ ಆರತಕ್ಷತೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಸುಧಾಕರ್; ನವ ದಂಪತಿಗೆ ಶುಭಹಾರೈಕೆ...ಇಲ್ಲಿವೆ ಪೋಟೋಗಳು

ಬೆಂಗಳೂರು: ಮಾಜಿ ಸಚಿವ ಹಾಗೂ ಗ್ಯಾರಂಟಿ‌ ಅನುಷ್ಠಾನ‌ ಸಮಿತಿ‌ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಅವರ ಪುತ್ರ ಅನೂಪ್ ವಾದುಲ್ ರೇವಣ್ಣ ಹಾಗೂ ಚಿತ್ರಾ ರಾಜಶೇಖರ್ ಅವರ ಆರತಕ್ಷತೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

ಕೆಂಗೇರಿ ಬಳಿಯಿರುವ ಪೂರ್ಣಿಮಾ ಪ್ಯಾಲೇಸ್​ನಲ್ಲಿ ನಡೆದ ಆರತಕ್ಷತೆ ಸಮಾರಂಭಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ನವ ವಧು-ವರನಿಗೆ ಶುಭಾಶಯ ಕೋರಿದರು.