ನ್ಯೂಸ್

ಸಿದ್ದರಾಮಯ್ಯ ಮತ್ತೆ ಸಿಎಂ; ಬಡವರ ಪಾಲಿಗೆ ವರದಾನವಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಸಿಗಲಿದ್ಯಾ ಮರುಜೀವ?

ಬೆಂಗಳೂರು: ಮುಖ್ಯಮಂತ್ರಿ ಖಾತೆಯ ಹಗ್ಗ ಜಗ್ಗಾಟದಲ್ಲಿ ಸಿಎಂ ಸ್ಥಾನ ಕೊನೆಗೂ ಸಿದ್ದರಾಮಯ್ಯ ಪಾಲಾಗಿದೆ. ಡಿಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್​​ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಿದ್ದಾರೆ ಎನ್ನುವ ಸುದ್ದಿ ಖಚಿತವಾಗುತ್ತಿದ್ದಂತೆ ಹಲವು ಯೋಜನಗಳಿಗೆ ಮತ್ತೆ ಮರುಜೀವ ಸೀಗುತ್ತಾ? ಎನ್ನುವ ಚರ್ಚೆ ಶುರುವಾಗಿದೆ.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕರ್ನಾಟಕದಾದ್ಯಂತ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ. ಇಂದಿರಾ ಕ್ಯಾಂಟಿನ್​​​ಗಳಿಗೆ ಮರುಜೀವ ನೀಡಬೇಕೆನ್ನುವ ಆಗ್ರಹ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಹುತೇಕ ಕ್ಯಾಂಟೀನ್​ಗಳು ಮುಚ್ಚಲ್ಪಟ್ಟಿದ್ದರೆ, ಅನೇಕ ಕ್ಯಾಂಟೀನ್​ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಬಡವರಿಗೆ, ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನದ ಊಟ ಸಿಗುತ್ತಿತ್ತು. ಕೇವಲ 10 ರೂಪಾಯಿಗೆ ಬಡ ಜನರಿಗೆ ಊಟ ಸಿಗುತ್ತಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ರಾಜ್ಯದ ಎಲ್ಲಾ ಕ್ಯಾಂಟಿನ್​​ಗಳಿಗೆ ಅನುದಾನ ನೀಡಲಾಗಿತ್ತು. ಅದ್ರೆ ಬಿಜೆಪಿ ಸರ್ಕಾರ ಬಂದ ಕೆಲವೇ ದಿನಗಳಲ್ಲಿ ರಾಜ್ಯದ ಹಲವು ಕಡೆ ಅನುದಾನ ಕೊಡದೆ ಕ್ಯಾಂಟಿನ್ ಬಂದ್ ಮಾಡಲಾಗಿತ್ತು. ಹೀಗಾಗಿ ಮತ್ತೆ ಇಂದಿರಾ ಕ್ಯಾಂಟಿನ್​​​ಗಳು ತೆರೆಯಬೇಕು ಎಂದು ಬಿಬಿಎಂಪಿ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದಿದ್ದಾರೆ. ಬಡವರ ಪಾಲಿನ ಇಂದಿರಾ ಕ್ಯಾಂಟಿನ್ ಮುಂದಿನ ದಿನಗಳಲ್ಲಿ ಮತ್ತೆ ರಾಜ್ಯದೇಲ್ಲೆಡೆ ಕಾರ್ಯನಿರ್ವಹಿಸುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.