Siddaramaiah:ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ರೋಷಾವೇಶದ ಮಾತುಗಳನ್ನಾಡಿದ್ದಾರೆ.
ಇದನ್ನೂ ಓದಿ:ಚಾಂಪಿಯನ್ಸ್ ಟ್ರೋಫಿ ಎಫೆಕ್ಟ್: ಪಾಕಿಸ್ತಾನದಲ್ಲಿ ಕೆಲಸ ಕಳೆದುಕೊಂಡ 100ಕ್ಕೂ ಅಧಿಕ ಪೊಲೀಸರು! Champions Trophy
ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಬುಧವಾರ ಸುದ್ದಿಗಾರ ಜತೆ ಮಾತನಾಡಿದ ಸಚಿವರು, ಸಿಎಂ ಸ್ಥಾನ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಇದ್ದಾರೆ, ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಚರ್ಚೆ, ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ?. ಅದೊಂಥರ ಬೆಂಕಿ, ಬೆಂಕಿ ಮುಟ್ಟಿದರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತಿವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲಾ, ಮುಟ್ಟಿದರೆ ಸುಟ್ಟೋಗ್ತಾರೆ ಎಂದಿದ್ದಾರೆ.
ಸಿದ್ದರಾಮಯ್ಯನವರು ಸಿಎಂ ಇದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಇದ್ದಾರೆ. ಅವರೇನಾದ್ರೂ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ, ನಾವು ಅಭಿಪ್ರಾಯ ತಿಳಿಸಬಹುದು. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ. ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಅಂತ ಹೇಳಿಲ್ಲಾ ಎಂದ ಸಚಿವ, ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರುತ್ತೆ. ದಲಿತ, ಅಲ್ಪಸಂಖ್ಯಾತ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ. ತೀರ್ಮಾನ ಹೈ ಕಮಾಂಡ್ಗೆ ಬಿಟ್ಟಿದ್ದು ಎಂದಿದ್ದಾರೆ.