Budget: ವಿಧಾನಸಭೆಯಲ್ಲಿ ಮಂಡಿಸಿದ 2025-26 ನೇ ಸಾಲಿನ ರಾಜ್ಯ ಬಜೆಟ್ ರಾಜ್ಯವನ್ನು ಆರ್ಥಿಕ ಪ್ರಗತಿಪಥದತ್ತ ಕೊಂಡುಹೋಗುವ ಯಾವುದೇ ರಚನಾತ್ಮಕ ಪ್ರಸ್ತಾವನೆಗಳಿಲ್ಲದ ಸತ್ವಹೀನ ಬಜೆಟ್ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಜೋಶಿ, '' ಪ್ರತಿಯೊಂದಕ್ಕು ಎಲ್ಲದಕ್ಕೂ ಕೇಂದ್ರ ಸರ್ಕಾರದಡೆ ಬೊಟ್ಟು ಮಾಡುವುದನ್ನೇ ರೂಢಿ ಮಾಡಿಕೊಂಡಿರುವ ಮುಖ್ಯಮಂತ್ರಿ ಯಾವದೇ ಅರ್ಥಿಕ ಮೂಲತತ್ವಗಳ ಸ್ಪರ್ಶ ನೀಡುವಲ್ಲಿ ವಿಫಲರಾಗಿದ್ದಾರೆ. ರೂ 4.9 ಲಕ್ಷ ಕೋಟಿ ಬೃಹತ್ ಗಾತ್ರದ ಬಜೆಟ್ ಮಂಡಿಸಿದ್ದರೂ ಸರ್ವವರ್ಗದ ಸಮಭಾವ ಹಾಗೂ ಸರ್ವಪ್ರದೇಶಗಳ ಅಭಿವೃದ್ಧಿಯ ಸಮತೋಲನ ಈ ಬಜೆಟ್ ವಿಫಲವಾಗಿದೆ'' ಎಂದಿದ್ದಾರೆ.
ಇದನ್ನೂ ಓದಿ:ಹಾಲನ್ನು ಕುದಿಸುವಾಗ ಒಲೆಯ ಮೇಲೆ ಚೆಲ್ಲದಂತೆ ತೆಡೆಯೊದೇಗೆ?; ಈ ಸಿಂಪಲ್ ಟ್ರಿಕ್ಸ್ ಅನುಸರಿಸಿ.. | Kitchen Tricks
ಇದು ಒಂದು ಅಲ್ಪಸಂಖ್ಯಾತರ ಓಲೈಕೆಯ ಬಜೆಟ್ ಆಗಿದೆ ಎಂದಿರುವ ಕೇಂದ್ರ ಸಚಿವರು, ರಾಜ್ಯದ ಒಟ್ಟು ಸಾಲ ರೂ 8 ಲಕ್ಷ ಕೋಟಿಗೆ ಸಮೀಪಿಸಿದ್ದು ರಾಜ್ಯ ಜಿಡಿಪಿಯ 23% ರಷ್ಟಾಗಿರುವುದು ಕಳವಳಕಾರಿಯಾಗಿದೆ. ರೆವೆನ್ಯು ವೆಚ್ಚ ರೂ 3,11,400 ಲಕ್ಷ ಕೋಟಿ, ಬಂಡವಾಳ ವೆಚ್ಚ ರೂ 76,400 ಕೋಟಿ ಇದ್ದು ವಿತ್ತೀಯ ಕೊರತೆ ನಿಗದಿ ಪಡಿಸುವಲ್ಲಿ ಯಾವುದೇ ತಾತ್ವಿಕ ವ್ಯವಸ್ಥೆ ಪಾಲಿಸಲಾಗಿಲ್ಲ. ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ 14% ರಷ್ಟು ಅನುದಾನ ನೀಡಲಾಗಿದೆ ಹಾಗೂ ಶಿಕ್ಷಣ ಹಾಗೂ ಆರೋಗ್ಯಕ್ಕೆ ಕ್ರಮವಾಗಿ 10% ಹಾಗೂ 5% ರಷ್ಟು ಅನುದಾನ ತೃಪ್ತಿಕರವಾಗಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಊದಿಕೊಂಡ ಕಣ್ಣು, ಬದಲಾದ ಮುಖ ಚಹರೆ.. ನಟಿ ರನ್ಯಾ ರಾವ್ ಮೇಲೆ ಅಧಿಕಾರಿಗಳು ಹಲ್ಲೆ ಮಾಡಿದ್ದಾರೆಯೇ? | Ranya Rao
ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಈ ಬಜೆಟ್ನಲ್ಲಿ ಗಮನಾರ್ಹ ಹಂಚಿಕೆ ಇಲ್ಲದಿರುವುದು ಆರ್ಥಿಕ ಪ್ರಗತಿಗೆ ದೊಡ್ಡ ಹೊಡೆತವಾಗಿದೆ. ರಸ್ತೆಗಳು ಮತ್ತು ಇತರ ಮೂಲಸೌಕರ್ಯ ಯೋಜನೆಗಳು ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುತ್ತವೆ ಮತ್ತು ಖಾಸಗಿ ಹೂಡಿಕೆಯನ್ನು ಆಕರ್ಷಿಸುತ್ತವೆ. ಆದರೆ, ಈ ಬಜೆಟ್ನಲ್ಲಿ ಇಂತಹ ಯೋಜನೆಗಳಿಗೆ ಆದ್ಯತೆ ನೀಡದಿರುವುದು ರಾಜ್ಯದ ಸ್ಪರ್ದಾತ್ಮಕತೆಯನ್ನು ಕುಗ್ಗಿಸುತ್ತದೆ ಎಂದಿದ್ದಾರೆ.