ನ್ಯೂಸ್

ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ ಪತ್ನಿ

ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆ ಮಾಜಿ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಅವರು ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ.

ದಸರಾ ಹಬ್ಬ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ದೇವಾಲಯದಲ್ಲಿ ಪ್ರಾರ್ಥನೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಚಾಮುಂಡಿ ತಾಯಿಯ ಪರಮ ಭಕ್ತೆಯಾಗಿರುವ ಸಿದ್ಧರಾಮಯ್ಯ ಪತ್ನಿ, ಪ್ರತಿ ವರ್ಷ ನವರಾತ್ರಿಯ ಒಂಬತ್ತು ದಿನಗಳ‌ ಕಾಲ ತಾಯಿಯ ದರ್ಶನ ಪಡೆಯುತ್ತಾರೆ.