ನವದೆಹಲಿ: ಕರೊನಾ ಸೋಂಕಿತ ವ್ಯಕ್ತಿಯ ಸಂಪರ್ಕದಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ 108 ಸಿಬ್ಬಂದಿ ಕ್ವಾರಂಟೈನ್ಗೆ ಗುರಿಯಾಗಿದ್ದಾರೆ.
ರೋಗಿಗಳಿಬ್ಬರ ಎರಡನೇ ಪರೀಕ್ಷೆಯಲ್ಲೂ ಕೋವಿಡ್-19 ಪಾಸಿಟಿವ್ ಫಲಿತಾಂಶ ಬಂದಿದ್ದರಿಂದ ಅವರೊಂದಿಗೆ ಸಂಪರ್ಕದಲ್ಲಿದ್ದ ವೈದ್ಯರು, ನರ್ಸ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗೆ ದಿಗ್ಬಂಧನ ವಿಧಿಸಲಾಗಿದೆ.
108 ಸಿಬ್ಬಂದಿಯಲ್ಲಿ 85 ಮಂದಿ ಮನೆಯಲ್ಲಿ ಹಾಗೂ 23 ಮಂದಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ಆದರೆ, ಈವರೆಗೂ ಸಿಬ್ಬಂದಿಯಲ್ಲಿ ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ. ಇನ್ನು 2 ರಿಂದ 3 ಮೂರು ದಿನಗಳಲ್ಲಿ ಯಾವುದಾದರೂ ರೋಗ ಲಕ್ಷಣಗಳು ಕಂಡುಬಂದರೆ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುವುದು ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಚೇರ್ಮನ್ ಡಾ. ಡಿ.ಎಸ್. ರಾಣಾ ತಿಳಿಸಿದ್ದಾರೆ. (ಏಜೆನ್ಸೀಸ್)