ನ್ಯೂಸ್

SIR ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ: ಮಲ್ಲಿಕಾರ್ಜುನ ಖರ್ಗೆ| Mallikarjun Kharge

Mallikarjun Kharge: ಬಿಹಾರದಲ್ಲಿ ನಡೆಯುತ್ತಿರುವ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಸಂಸತ್ತಿನಲ್ಲಿ ನಡೆಸಬೇಕೆಂಬ ವಿರೋಧ ಪಕ್ಷದ ಬೇಡಿಕೆಯನ್ನು ಎಐಸಿಸಿ ಅಧ್ಯಕ್ಷ ​ಮಲ್ಲಿಕಾರ್ಜುನ ಖರ್ಗೆ ಬುಧವಾರ(ಆಗಸ್ಟ್​6) ಪುನರುಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ನಾವು SIR ಕುರಿತು ಚರ್ಚೆ ಮಾಡಲು ಬಯಸುತ್ತೇವೆ. ವಿರೋಧ ಪಕ್ಷವು ಎಸ್​ಐಆರ್​ ಪ್ರಕ್ರಿಯೆಯಲ್ಲಿನ ತಪ್ಪುಗಳನ್ನು ಎತ್ತಿ ತೋರಿಸಲು ಮತ್ತು ದೇಶದ ಹಿತಾಸಕ್ತಿಗಾಗಿ ಸಲಹೆಗಳನ್ನು ನೀಡಲು ಬಯಸುತ್ತದೆ ಎಂದು ತಿಳಿಸಿದ್ದಾರೆ.

ಸಂಪೂರ್ಣ ಚರ್ಚೆ ನಡೆದರೆ, ಚುನಾವಣಾ ಆಯೋಗ ಎಲ್ಲೇಲ್ಲಿ ತಪ್ಪುಗಳನ್ನು ಮಾಡಿದ್ದಾರೆ ಹಾಗೂ ಸಂವಿಧಾನಬಾಹಿರ ರೀತಿಯಲ್ಲಿ ಏನೇ ಮಾಡಿದ್ದರು, ನಾವು ಸಲಹೆಗಳನ್ನು ನೀಡಬಹುದು ಎಂದು ಹೇಳಿದ್ದಾರೆ. ಅಲ್ಲದೇ, ದೇಶದ ಹಿತದೃಷ್ಟಿಯಿಂದ, ವಿಶೇಷವಾಗಿ ಮತದಾರರರು ಕಳೆದುಕೊಳ್ಳುತ್ತಿರುವ ಹಕ್ಕುಗಳನ್ನು ನಾವು ರಕ್ಷಿಸಬಹುದು ಎಂದು ಬಯಸುತ್ತೇವೆ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಮುಂದುವರೆದು ಮಾತನಾಡಿದ ಎಐಸಿಸಿ ಅಧ್ಯಕ್ಷರು, ದಲಿತರ ಮತಗಳನ್ನು ಕಡಿತಗೊಳಿಸಲಾಗುತ್ತಿದೆ. ಅಲ್ಪಸಂಖ್ಯಾತರ ಹಾಗೂ ಕಾರ್ಮಿಕರ ಮತಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬುಡಕಟ್ಟು ಜನಾಂಗದ ಮತಗಳು ಮತ್ತು ವಲಸೆ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.