ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ನ್ಯಾಯಾಲಯಕ್ಕೆ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
2,144 ಪುಟಗಳ ದೋಷಾರೋಪ ಪಟ್ಟಿಯನ್ನು 42 ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್ಶೀಟ್ ಇದಾಗಿದೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ತನಿಖೆ ಕೈಗೆತ್ತಿಕೊಂಡು ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸುಮಾರು 2,144 ಪುಟಗಳ ಚಾರ್ಜ್ಶೀಟ್ನ್ನು ಅಧಿಕಾರಿಗಳು ಸಲ್ಲಿಸಿದ್ದಾರೆ. ಇದಲ್ಲದೆ ಹೊಳೆನರಸೀಪುರದ ಶಾಸಕ ಎಚ್.ಡಿ. ರೇವಣ್ಣ ಅವರ ವಿರುದ್ಧವೂ ಎಸ್ಐಟಿ ಚಾರ್ಜ್ಶೀಟ್ ಸಲ್ಲಸಿದೆ.
ಇನ್ನು ಮೈಸೂರು ಜಿಲ್ಲೆಯ ಕೆಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ 9 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ನಿಂದ ಸಮನ್ಸ್ ಜಾರಿ ಮಾಡಲಾಗಿದೆ.