ನ್ಯೂಸ್

ಲೋಕಸಭಾ ಚುನಾವಣಾ ಫಲಿತಾಂಶ ನೋಡಲು ಪ್ರಜ್ವಲ್ ರೇವಣ್ಣಗೆ ಅವಕಾಶ ಮಾಡಿಕೊಟ್ಟ ಎಸ್​ಐಟಿ

ಬೆಂಗಳೂರು: ‘ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ’ ಆರೋಪದಡಿ ವಿಶೇಷ ತನಿಕಾ ದಳದ (SIT) ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್​ ರೇವಣ್ಣರನ್ನು ನ್ಯಾಯಾಲಯ ಜೂನ್​ 06ರವರೆಗೆ ಎಸ್​ಐಟಿ ವಶಕ್ಕೆ ನೀಡಿದ್ದು, ಅಧಿಕಾರಿಗಳು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಇತ್ತ ಪ್ರಜ್ವಲ್ ರೇವಣ್ಣ ಅವರಿಗೆ ಲೋಕಸಭಾ ಚುನಾವಣಾ ಫಲಿತಾಂಶ ನೋಡುವ ಭಾಗ್ಯ ಸಿಕ್ಕಿದೆ.

ಇಂದು (ಜೂನ್​ 04) ಲೋಕಸಭೆ ಫಲಿತಾಂಶ ಹಿನ್ನಲೆ ಎಸ್​ಐಟಿ ವಶದಲ್ಲಿರುವ ಪ್ರಜ್ವಲ್​ ರೇವಣ್ಣ ಅಧಿಕಾರಿಗಳ ಬಳಿ ರಿಸಲ್ಟ್​ ನೋಡಲು ಟಿವಿ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿದ್ದರು. ಆರಂಭದಲ್ಲಿ ಪ್ರಜ್ವಲ್​ ಮನವಿ ತಿರಸದ್ಕರಿಸಿದ ಅಧಿಕಾರಿಗಳು ಆ ನಂತರ ಅವರ ಬೇಡಿಕೆಗಹೆ ಸ್ಪಂದಿಸಿದ್ದಾರೆ. ಇದೀಗ ರಿಸಲ್ಟ್​ ನೋಡಲು ಟಿವಿ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಪೆನ್‌ಡ್ರೈವ್ ವಿಚಾರ ಹೊರಬರುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು. ಎಸ್‌ಐಟಿ ನೋಟಿಸ್ ಜಾರಿ ಮಾಡಿದ್ದರೂ ಕ್ಯಾರೇ ಎಂದಿರಲಿಲ್ಲ. ಬಳಿಕ ಬರೋಬ್ಬರಿ 35 ದಿನಗಳ ಬಳಿಕ ಭಾರತಕ್ಕೆ ವಾಪಸ್ಸಾಗಿದ್ದರು. ಜರ್ಮನಿಯ ಮ್ಯೂನಿಕ್‌ನಿಂದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.