ನ್ಯೂಸ್

ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯದಿಂದ ಆರು ಮಕ್ಕಳು ಬಲಿ; ತನಿಖೆ ಆರಂಭಿಸಿದ ಕೇಂದ್ರ| Madhya Pradesh

Madhya Pradesh: ಮಧ್ಯಪ್ರದೇಶದ ಚಿಂದ್ವಾರಾದಲ್ಲಿ ಕೆಮ್ಮಿನ ಸಿರಪ್ ಸೇವನೆಯಿಂದ ಮಕ್ಕಳಿಗೆ ಮೂತ್ರಪಿಂಡ ವೈಫಲ್ಯ ಉಂಟಾಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಈ ವಿಷಯ ಬೆಳಕಿಗೆ ಬಂದ ತಕ್ಷಣ, ಚಿಂದ್ವಾರ ಜಿಲ್ಲಾಧಿಕಾರಿ ಶೀಲೇಂದ್ರ ಸಿಂಗ್ ತಕ್ಷಣ ಕ್ರಮ ಕೈಗೊಂಡು ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಎಂಬ ಎರಡು ಕೆಮ್ಮಿನ ಸಿರಪ್‌ಗಳ ಮೇಲೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.

ಇನ್ನೂ ಮಕ್ಕಳು ಸಾವನ್ನಪ್ಪಿದ ನಂತರ, ಕೇಂದ್ರ ಆರೋಗ್ಯ ಸಚಿವಾಲಯ ತನಿಖೆಯನ್ನು ಪ್ರಾರಂಭಿಸಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ತಂಡವನ್ನು ಈ ಪ್ರದೇಶಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವನ್ನಪ್ಪಿದ ಮಕ್ಕಳನ್ನು ಐದು ವರ್ಷದೊಳಗಿನವರು ಎಂದು ಹೇಳಲಾಗಿದೆ. ಎಲ್ಲಾ ಮಕ್ಕಳು ಶೀತ ಮತ್ತು ಜ್ವರದ ಹಿನ್ನೆಲೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ವೈದ್ಯರು ಕೆಮ್ಮಿನ ಸಿರಪ್‌ಗಳು ಸೇರಿದಂತೆ ನಿಯಮಿತ ಔಷಧಿಗಳನ್ನು ಸೂಚಿಸಿದ್ದರು ಎಂದು ಹೇಳಲಾಗಿದೆ. ಔಷಧಿ ಸೇವಿಸಿದ ಕೆಲವೇ ದಿನಗಳಲ್ಲಿ ಮತ್ತೆ ಜ್ವರದ ಲಕ್ಷಣಗಳ ಜೊತೆ ಮೂತ್ರ ಮೂತ್ರಪಿಂಡದ ಸೋಂಕುಗಳು ಕಂಡುಬಂದು ನಂತರ ಮಕ್ಕಳು ಸಾವನ್ನಪ್ಪಿವೆ ಎಂದು ಪೋಷಕರು ಆರೋಪಿಸಿದ್ದಾರೆ.

ಕಲುಷಿತ ಕೆಮ್ಮಿನ ಸಿರಪ್ ಈ ಸಾವುಗಳಿಗೆ ಕಾರಣವಾಗಿರಬಹುದು ಎಂದು ಆರೋಗ್ಯ ಅಧಿಕಾರಿಗಳು ಬಲವಾಗಿ ಶಂಕಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಪ್ರಿಸ್ಕೂಲ್‌ನಲ್ಲಿ ಮಾರಾಟವಾಗುವ ಈ ಔಷಧವು ಮೂತ್ರಪಿಂಡಗಳಿಗೆ ತೀವ್ರ ಹಾನಿಯನ್ನುಂಟುಮಾಡುವ ಅತ್ಯಂತ ವಿಷಕಾರಿ ರಾಸಾಯನಿಕವಾದ ಡೈಥಿಲೀನ್ ಗ್ಲೈಕಾಲ್ (DEG) ಯಿಂದ ಕೂಡಿರಬಹುದು ಎನ್ನಲಾಗಿದೆ. ಈ ಹಿನ್ನೆಲೆ ನಿಖರವಾದ ಕಾರಣವನ್ನು ತಿಳಿಯಲು ಮುಂದಿನ ದುರಂತಗಳನ್ನು ನಿಲ್ಲಿಸುವ ಸಲುವಾಗಿ ಸರ್ಕಾರದ ತ್ವರಿತ ಪ್ರತಿಕ್ರಿಯೆ ಕೈಗೊಂಡಿದೆ.

(ಏಜೆನ್ಸೀಸ್)