ನವದೆಹಲಿ: ಕಬ್ಬು ತುಂಬಿದ್ದ ಟ್ಯಾಕ್ಟರ್ಗೆ ಕಾರೊಂದು (Car) ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ತಾಂಡಿಯನ್‌ವಾಲಾದಲ್ಲಿನಡೆದಿದೆ.ಲಾಹೋರ್ನಿಂದ ತಾಂಡಿಯನ್‌ವಾಲಾಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದ್ದು, ಅಪಘಾತ ಸಂಬಂಧ ಪೊಲೀಸರು ಟ್ಯಾಕ್ಟರ್ಅನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ಕುರಿತು ಮಾತನಾಡಿರುವ ಸ್ಟೇಷನ್ ಹೌಸ್ ಅಧಿಕಾರಿಯೊಬ್ಬರು, ನಸುಕಿನ ಜಾವ ಅಪಘಾತ ಸಂಭವಿಸಿದ್ದು, ದಟ್ಟವಾದ ಮಂಜು ತುಂಬಿದ್ದ ಕಾರಣ ರಸ್ತೆ ಸರಿಯಾಗಿ ಕಾಣಿಸದೆ ಅಪಘಾತ ಸಂಭವಿಸಿದೆ. ಕಬ್ಬು ತುಂಬಿದ್ದ ಟ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಮಕ್ಕಳು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾಹೋರ್ ಮೂಲದ ಕುಟುಂಬವು ತಾಂಡಿಯನ್‌ವಾಲಾಗೆ ಪ್ರಯಾಣಿಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಅಪಘಾತದ ಬಳಿಕ ಟ್ಯಾಕ್ಟರ್ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಚಾಲಕನನ್ನು ಪತ್ತೆ ಹಚ್ಚಲು ತಂಡವನ್ನು ರಚಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.