ನ್ಯೂಸ್

ಕನ್ನಡದಲ್ಲಷ್ಟೇ ಅಲ್ಲ, ಇತರೆ ಭಾಷೆಗಳಿಗೆ ಅನುವಾದಗೊಂಡ ಭೈರಪ್ಪನವರ ಜನಪ್ರಿಯ ಕಾದಂಬರಿಗಳಿವು.. | SL Bhyarappa

SL Bhyarappa: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಸಾಹಿತಿ, ಪದ್ಮಭೂಷಣ ಗೌರವ ಪುರಸ್ಕೃತ ಎಸ್​.ಎಲ್​. ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ (ಸೆ.26) ಮೈಸೂರಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಭೈರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

ಕನ್ನಡದ ಮೇರು ಸಾಹಿತಿ, ಕವಿ ಹಾಗೂ ಕಾದಂಬರಿಕಾರ ಭೈರಪ್ಪ ಅವರು ಇಹಲೋಕ ತ್ಯಜಿಸಿದ್ದರೂ ಅವರು ರಚಿಸಿದ ಕೃತಿಗಳು, ಕಾದಂಬರಿಗಳಲ್ಲಿ ಹಚ್ಚಳಿಯದೇ ಉಳಿದಿದ್ದಾರೆ. ಇವರ ಕೃತಿ ಹಾಗೂ ಕಾದಂಬರಿಗಳು ಬರೀ ಕನ್ನಡದಲ್ಲಷ್ಟೇ ಅಲ್ಲ ಇತರ ಹಲವು ಭಾಷೆಗಳಲ್ಲಿ ಭಾಷಾಂತರಗೊಂಡಿವೆ.

ಇತರ ಭಾಷೆಗಳಿಗೆ ಅನುವಾದಗೊಂಡ ಕೃತಿಗಳು

ಹೌದು ಆಯಾ ಕಾಲದಲ್ಲಿ ಬಂದ ಅವರ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದ ಗೊಂಡಿವೆ. ಗೃಹಭಂಗ,ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ.

ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿದ ಕಾದಂಬರಿಗಳು

ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ ೧೯೬೬ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೭೫ ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.(ಏಜೆನ್ಸೀಸ್​)