ನವದೆಹಲಿ: ಹಾವು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೀವು ಎಂದಾದರೂ ನೋಡಿದ್ದೀರಾ? ಹಾವುಗಳು ಕೂಡ ಆತ್ಮಹತ್ಯೆ ಮಾಡಿಕೊಳ್ಳುತ್ತವೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಇತ್ತೀಚೆಗೆ ಹಾವೊಂದು ಆತ್ಮಹತ್ಯೆ ಮಾಡಿಕೊಂಡಿದೆ. ಈ ಕುರಿತಾದ ಫೋಟೋ ವೈರಲ್ ಆಗಿದೆ.
ಹಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ದೃಶ್ಯವನ್ನು ನೋಡಿದ ವ್ಯಕ್ತಿಯೊಬ್ಬರು ಆಘಾತಕ್ಕೊಳಗಾದರು ಮತ್ತು ಅದನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ, ಹಾವು ಸ್ವತಃ ಸುತ್ತಿಕೊಂಡು 10 ನಿಮಿಷಗಳ ನಂತರ ಕೊನೆಯುಸಿರೆಳೆದಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಫೋಟೋದಲ್ಲಿ ಹಾವೊಂದು ಸುತ್ತಿಕೊಂಡಿರುವುದನ್ನು ಕಾಣಬಹುದು. ಹಾವು ತನ್ನ ಬಾಲದಿಂದ ಬಾಯಿ, ಕತ್ತನ್ನು ಬಿಗಿಯಾಗಿ ಹಿಡಿದಿತ್ತು. ಈ ಹಾವು ಆತ್ಮಹತ್ಯೆಗೆ ಯತ್ನಿಸಿದ 10 ನಿಮಿಷಗಳ ನಂತರ ಕತ್ತು ಹಿಸುಕಿ ಸಾವನ್ನಪ್ಪಿದೆ ಎಂದು ಫೋಟೋ ಶೇರ್ ಮಾಡಿದವರು ಹೇಳುತ್ತಿದ್ದಾರೆ.
ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಹತ್ತು ಹಲವು ಪ್ರಶ್ನೆ, ಅನುಮಾನಗಳನ್ನು ಹುಟ್ಟು ಹಾಕಿದೆ. ಪ್ರಾಣಿಗಳು ಮತ್ತು ಹಾವುಗಳು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಾರಂಭಿಸಿದವು. ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡುವ ಬದಲು ಚಿತ್ರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಈಗ ಜನರು ಕಾಮೆಂಟ್ ಮಾಡುತ್ತಾ ಮಾತನಾಡಿಕೊಳ್ಳಲು ಶುರು ಮಾಡಿದ್ದಾರೆ. ಆದರೆ ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎನ್ನುವುದು ಮಾತ್ರ ತಿಳಿದುಬಂದಿಲ್ಲ.