ನ್ಯೂಸ್

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ: ಸಚಿವ ಸಂತೋಷ್ ಲಾಡ್ ಭರವಸೆ

ಬೆಂಗಳೂರು ಪತ್ರಿಕಾ ವಿತರಕರಿಗೆ ಕಾರ್ಮಿಕ ಇಲಾಖೆಯು ಸಾಮಾಜಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಿದೆ. ಮುಂದಿನ ದಿನಗಳಲ್ಲಿ ಸಮಾಜದ ಎಲ್ಲ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಯನ್ನು ಕಲ್ಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ವಿಶೇಷ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಭಾನುವಾರ ಬೆಂಗಳೂರು ಪ್ರೆಸ್‌ಕ್ಲಬ್‌ನ ನೀಡಿದ 2023ನೇ ಸಾಲಿನ ವಿಶೇಷ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.